ಮಂಗಳೂರು: “ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಹಾಗೂ ಆದಾಯ ತೆರಿಗೆ ಇಲಾಖೆ ಮೂಲಕ ಬಂಧಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರನ್ನು ಕುತಂತ್ರದಿಂದ ಬಂಧಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾನೂನಾತ್ಮಕವಾಗಿ ಡಿಕೆಶಿ ಅವರದ್ದೇ ರೀತಿ ಹೋರಾಟ ಮಾಡುತ್ತಾರೆ. ಡಿಕೆಶಿ ಜತೆ ನಾವಿದ್ದೇವೆ. ಕಾನೂನು ಹೋರಾಟದಲ್ಲಿಯೂ ಅವರು ಜಯಗಳಿಸುವ ವಿಶ್ವಾಸ ಇದೆ” ಎಂದರು. ”
ಯುಪಿಎ ಸರಕಾರ ಆಡಳಿತದಲ್ಲಿದ್ದಾಗ ಆರ್‌ಬಿಐನಲ್ಲಿ 3.90 ಲಕ್ಷ ಕೋಟಿ ರೂಪಾಯಿ ಹಣ ಆರ್‌ಬಿಐನಲ್ಲಿತ್ತು. ಅದರಲ್ಲಿ 1.76 ಲಕ್ಷ ಕೋಟಿ ಹಣವನ್ನು ಕೇಂದ್ರ ಪಡೆದಿದೆ. ದೇಶಕ್ಕಾಗಿ ನಾವು ಈ ರೀತಿ ಮಾಡುತ್ತಿದ್ದೇವೆ ಎಂದು ಹೇಳಬಹುದು. ಆದರೆ ಪಾರದರ್ಶಕ ಆಡಳಿತದ ಬಗ್ಗೆ ಮಾತನಾಡುವ ಕೇಂದ್ರ ಸರ್ಕಾರ ಈ ಹಣವನ್ನು ಯಾಕಾಗಿ ಪಡೆದಿದೆ ಎಂಬುದನ್ನು ಜನಸಾಮಾನ್ಯರಿಗೆ ತಿಳಿಸಬೇಕು. ದೇಶದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಹೂಡಿಕೆಗೆ ಮುಂದಾಗುವವರು ಹಿಂದೇಟು ಹಾಕುತ್ತಾರೆ” ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…