Featured

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು

ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು ಖಾಸಗಿ ತರಬೇತಿ ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ(22) ಮೃತಪಟ್ಟಿದ್ದಾರೆ.

ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ ಮೂಲದವರಾಗಿದ್ದು, ಈ ಪ್ರದೇಶವು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುತ್ತದೆ. ಲಭ್ಯ ಮಾಹಿತಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು.

ಅಭಿಷೇಕ್ ಅವರ ತಂದೆ ಪ್ರಭಾಕರ್ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ತಮ್ಮ ಕುಟುಂಬದೊಂದಿಗೆ ಆಗಾಗ ಕಣಜಾರು ಗ್ರಾಮದ ಕಾಡೆಬರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು.

ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರು ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

17 minutes ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

3 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

3 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

3 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

3 hours ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

4 hours ago