ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಬುಧವಾರ ಇಡೀ ದಿನ ಕ್ಷೇತ್ರದ ಹಲವಾರು ದೇವಸ್ಥಾನಗಳು, ಚರ್ಚ್ ಹಾಗೂ ಮಸೀದಿಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಬುಧವಾರ ಇಡೀ ದಿನ ಕ್ಷೇತ್ರದ ಹಲವಾರು ದೇವಸ್ಥಾನಗಳು, ಚರ್ಚ್ ಹಾಗೂ ಮಸೀದಿಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ನೀಲಾವರದ ದುರ್ಗಾಪರಮೇಶ್ವರಿ ದೇವಸ್ಥಾನ, ಕನ್ನಾರು ಬೊಬ್ಬರ್ಯ ದೇವಸ್ಥಾನ, ಸೂರೆಬೆಟ್ಟು ಸಿದ್ಧಿವಿನಾಯಕ ದೇವಸ್ಥಾನ ಚೇರ್ಕಾಡಿ ವಿಷ್ಣುಮೂರ್ತಿ ದೇವಸ್ಥಾನ ಪಾಡಿಗಾರು, ದೊಡ್ಡ ಣಗುಡ್ಡೆಯ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ. ಬ್ರಹ್ಮಬೈದರ್ಕಳ ಗರಡಿ ಕಲ್ಮಾಡಿಗೆ ತೆರಳಿ ಪೂಜೆ ಸಲ್ಲಿಸಿ, ಚುನಾವಣೆಯಲ್ಲಿ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದರು.
ಉಡುಪಿ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.
ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್, ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್, ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್, ಸಿರಿಯನ್ ಆಥ್ರೋಡಕ್ಸ್ ಚರ್ಚ್, ಕೆಮ್ಮಣ್ಣಿನ ಸಂತ ತೆರೆಸಾ ಚರ್ಚ್, ತೊಟ್ಟಂನ ಸಂತ ಅಮ್ಮನವರ ಚರ್ಚ್, ಪೆರಂಪಳ್ಳಿಯ ಫಾತಿಮಾ ಚರ್ಚ್‌ಗೆ ಅವರು ಭೇಟಿ ನೀಡಿದರು. ರೆಹಮಾನಿಯಾ ಜುಮಾ ಮಸೀದಿಗೂ ಸಚಿವ ಪ್ರಮೋದ್ ಅವರು ಭೇಟಿ ನೀಡಿದರು.
ಉಡುಪಿ ನಗರದ ಮೀನು ಮಾರಕಟ್ಟೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು ಮತ ನೀಡುವಂತೆ ಮನವಿ ಮಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…