ಕಾಪುವಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ್ ರಾವ್ ಭೇಟಿ-ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ vishwanews24

Featured, ಉಡುಪಿ

ಕಾಪು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಕಾಪು :  ವಿಧಾನಸಭಾ ಕ್ಷೇತ್ರದಲ್ಲಿ ಅನುಷ್ಠಾನ ಹಂತದಲ್ಲಿರುವ ಸರಕಾರದ ವಿವಿಧ ಯೋಜನೆಗಳ ಪುನರ್ ಪರಿಶೀಲನೆಗಾಗಿ ಜಿಲ್ಕಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಭೇಟಿ ನೀಡಿದರು.

ಹೆಜಮಾಡಿ ಬಂದರು, ಕಾಪು ಬೀಚ್, ಕಾಪು ಮಿನಿ ವಿಧಾನಸೌಧ ಮತ್ತು ಬೃಹತ್ ಕುಡಿಯುವ ನೀರಿನ ಯೋಜನೆ ಮಂಜೂರಾಗಿದ್ದು,ಈ ಯೋಜನೆಗಳು
ಅನುಷ್ಠಾನ ಹಂತದಲ್ಲಿದೆ. ರಾಜ್ಯ ಸರಕಾರದ ಸೂಚನೆಯ ಮೇರೆಗೆ ಈ ಕಾಮಗಾರಿಗಳನ್ನು ಮುಂದುವರಿಸಲು ಪುನರಾಮರ್ಷೆ ನಡೆಸಲು ಇಲ್ಲಿಗೆ ಭೇಟಿ ನೀಡಿರುವುದಾಗಿ ಅವರು ತಿಳಿಸಿದರು.

ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮಾತನಾಡಿ, ಕಾಪು ಕ್ಷೇತ್ರದಲ್ಲಿ ಹಲವಾರು ಯೋಜನೆಗಳು ಅನುಷ್ಟಾನ ಹಂತದಲ್ಲಿವೆ. ಹಿಂದಿನ ಯೋಜನೆಗಳ ಜೊತೆಗೆ ಹೊಸ ಯೋಜನೆಗಳ ಅನುಷ್ಟಾನಕ್ಕೆ ರಾಜ್ಯ ಹಣಕಾಸು ಇಲಾಖೆಯ ಮಂಜೂರಾತಿ ಅಗತ್ಯವಿದ್ದು, ಅದಕ್ಕಾಗಿ ಪುನರ್ ಪರಿಶೀಲನೆ ನಡೆಸಿದ್ದಾರೆ. ಶೀಘ್ರ ಈ ಯೋಜನೆಗಳು ಅನುಷ್ಟಾನ ಗೊಳ್ಳುವ ನಿರೀಕ್ಷೆಯಿದೆ ಎಂದರು.

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯ ಅನಿಲ್ ಕುಮಾರ್, ಮಮತಾ ಕೆ. ಸಾಲ್ಯಾನ್, ಕಾಪು
ಕಂದಾಯ ಪರಿವೀಕ್ಷಕ ಕೆ. ರವಿ ಶಂಕರ್, ಉಪ ತಹಶಿಲ್ದಾರ್ ಚಂದ್ರಹಾಸ ಬಂಗೇರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ನಾಯಕ್, ಮೆಸ್ಕಾಂ ಅಧಿಕಾರಿ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.