Featured

ಕಾಪುವಿನಲ್ಲಿ ಕೂಡಲೇ ಸಬ್ ರಿಜಿಸ್ಟ್ರಾರ್ ಕಛೇರಿ ತೆರೆಯಲು ಮೆಲ್ವಿನ್ ಡಿಸೋಜ ಆಗ್ರಹ – Vishwanews24

ಕಾಪುವಿನಲ್ಲಿ ಕೂಡಲೇ ಸಬ್ ರಿಜಿಸ್ಟ್ರಾರ್ ಕಛೇರಿ ತೆರೆಯಲು ಮೆಲ್ವಿನ್ ಡಿಸೋಜ ಆಗ್ರಹ

ಉಡುಪಿ: ಹೊಸ ಕಾಪು ತಾಲೂಕು ಆಗಿ ಸುಮಾರು 5 ವರ್ಷಗಳೇ ಕಳೆದರೂ ಇನ್ನೂ ಕೂಡಾ ಕಾಪುವಿನಲ್ಲಿ ಹೊಸ ಸಬ್‍ರಿಜಿಸ್ಟ್ರಾರ್ ಕಛೇರಿಯ ಆರಂಭ ಆಗದೇ ಇರುವುದನ್ನು ನ್ಯಾಯವಾದಿ ಮೆಲ್ವಿನ್ ಡಿಸೋಜರವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.

ಕಾಪು ತಾಲೂಕಿನ ಜನರು ಉಡುಪಿ ಅಥವಾ ಮುಲ್ಕಿ ಸಬ್‍ರಿಜಿಸ್ಟ್ರಾರ್ ಕಛೇರಿಗೆ ಹೋಗಿ ದಸ್ತಾವೇಜು ನೊಂದಾಯಿಸಬೇಕಾಗಿದೆ. ಮುಲ್ಕಿಗೆ ಹೋಗಲು ಟೋಲ್ ಕಟ್ಟಬೇಕಾಗಿದೆ. ಕಾಪು ತಾಲೂಕಿಗೆ ಹೊಸ ಕಟ್ಟಡ ನಿರ್ಮಾಣವಾದರೂ ಕಾಮಗಾರಿ ಸಂಪೂರ್ಣ ಆಗದೇ ಇನ್ನೂ ಕೂಡಾ ಅಲ್ಲಿಗೆ ಯಾವುದೇ ಕಛೇರಿಗಳು ವರ್ಗಾವಣೆ ಆಗಿರುವುದಿಲ್ಲ. ಕಾಪು ತಾಲೂಕಿನ ಅನೇಕ ಕಡತಗಳು ಇನ್ನೂ ಕೂಡಾ ಉಡುಪಿ ತಾಲೂಕು ಕಛೇರಿಯಲ್ಲಿಯೇ ಇದ್ದು ಕಾಪುವಿಗೆ ವರ್ಗಾವಣೆ ಆಗದೇ ಇರುವುದು ಹಿಂದಿನ 5 ವರ್ಷ ಕೆಲಸ ಮಾಡಿದ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣವಾಗಿರುತ್ತದೆ. ಚುನಾವಣೆ ಹತ್ತಿರವಾಗುವ ಸಂದರ್ಭದಲ್ಲಿ ಕಾಪುವಿಗೆ ಹೊಸ ಸಬ್ ರಿಜಿಸ್ಟ್ರಾರ್ ಕಛೇರಿ ಸ್ಥಾಪನೆ ಎಂದು ಪತ್ರಿಕೆಯಲ್ಲಿ ಬಂದಿರುವುದು ಈಗ ರಚನೆಯಾಗದೇ ಇರುವುದು ಕೇವಲ ಚುನಾವಣಾ ಗಿಮಿಕ್ ಎಂದು ಸ್ಪಷ್ಟವಾಗಿದೆ. ಜನರು ಒಮ್ಮೆ ಉಡುಪಿಗೆ ಮತ್ತೊಮ್ಮೆ ಕಾಪುವಿಗೆ ಅಲೆದಾಡುವಂತಾಗಿದೆ. ಕೂಡಲೇ ಕಾಪುವಿನಲ್ಲಿ ಹೊಸ ಸಬ್ ರಿಜಿಸ್ಟ್ರಾರ್ ಕಛೇರಿ ಹಾಗೂ ಕಾಪು ತಾಲೂಕಿಗೆ ಸಿಗಬೇಕಾದ ಸೌಲಭ್ಯಗಳು ಕೂಡಲೇ ಸಿಗುವಂತೆ ಮಾಡಲು ಈಗಿನ ಶಾಸಕರು ಶ್ರಮವಹಿಸಬೇಕಾಗಿ ಅವರು ಆಗ್ರಹಿಸಿದ್ದಾರೆ.

ಕಾಪು ಕ್ಷೇತ್ರದ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆಯವರ ಕನಸಿನ ಕೂಸು ಕಾಪು ತಾಲೂಕು ಅವರ ಅನುಪಸ್ಥಿತಿಯಲ್ಲಿ ಸೌಲಭ್ಯ ವಂಚಿತವಾಗಿದೆ. ಕಾಪು ಕ್ಷೇತ್ರದ ಅಭಿವೃದ್ಧಿಯ ಹರಿಕಾರ ವಿನಯ್ ಕುಮಾರ್ ಸೊರಕೆಯವರು ಶಾಸಕರಾಗಿದ್ದಲ್ಲಿ ಕಾಪು ತಾಲೂಕು ಎಲ್ಲಾ ಸೌಲಭ್ಯಗಳನ್ನು ಹೊಂದಿದ ಹೊಸ ತಾಲೂಕು ಆಗಿ ಮೂಡಿ ಬರುವುದರಲ್ಲಿ ಯಾವುದೇ ಸಂಶಯ ಇರಲಿಲ್ಲ ಹಾಗೂ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಂದಾಯ ಸಚಿವರಿಗೆ ಕೂಡಾ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ನ್ಯಾಯವಾದಿ ಹಾಗೂ ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರೂ ಆದ ಮೆಲ್ವಿನ್ ಡಿಸೋಜರವರು ಅವರು ತಿಳಿಸಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago