Featured

ಕಾಪುವಿನಲ್ಲಿ ಪ್ರಾಮಾಣಿಕತೆ ಮತ್ತುಅಭಿವೃದ್ಧಿಗೆ ಬೆಲೆ ಇದೆ ಅಂತ ನಂಬಿದ್ದೇನೆ : ವಿನಯ್ ಕುಮಾರ್ ಸೊರಕೆ – Vishwanews24

ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವ್ರದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೀನಿ , ಆದರೂ ನನ್ನನ್ನು ಸೋಲಿಸಿದ್ದೀರಿ..

ಈ ಬಾರಿಯಾದರೂ ನನ್ನನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿರಿ ಅನ್ನೊ ನಂಬಿಕೆ ಇದೆ..

ಗೆದ್ದು ಬಂದಲ್ಲಿ ಸಮಾಜದ ಎಲ್ಲಾ ವರ್ಗದವರ ಪರ ನಿಂತು ಸಮಾನತೆಯಿಂದ ಕೆಲಸ ಮಾಡ್ತಿನಿ..

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ..

ಉಡುಪಿ: ನನ್ನ ಶಾಸಕತ್ವದ ಅವಧಿಯಲ್ಲಿ ಕಾಪುವಿನಲ್ಲಿ ಅಭಿವ್ರದ್ಧಿಯ ಮೈಲಿಗಲ್ಲನ್ನೇ ಸ್ಥಾಪಿಸಿದ್ದೀನಿ.. ಆದರೂ ನನ್ನನ್ನು ಕಳೆದ ಬಾರಿ ಸೋಲಿಸಿದ್ದೀರಿ. ಈ ಬಾರಿಯಾದರೂ ಕಾಪು ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ಅಭಿವೃದ್ಧಿಗೆ ಬೆಲೆ ಇದೆ ಅಂತಾ ಸಾಬೀತು ಮಾಡೋ ಕೆಲಸವನ್ನು ಮತದಾರರು ಮಾಡಲೇಬೇಕಿದೆ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ಉದ್ಯಾವರ ಬಿಲ್ಲವ ಮಹಾಮಂಡಲದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದು ಮಾತನಾಡಿದರು.

ಈ ಬಾರಿ ಕಾಪು ಕ್ಷೇತ್ರ ಪ್ರಾಮಾಣಿಕತೆ ಅಭಿವೃದ್ಧಿ ಮತ್ತು ಹಣದ ಹೊಳೆಯ ನಡುವಿನ ಚುನಾವಣೆಯಾಗಿ ಮಾರ್ಪಟ್ಟಿದೆ. ಕಾಪುವಿನ ಮತದಾರರು ಬಹಳಷ್ಟು ಪ್ರಬುದ್ಧರಿದ್ದಾರೆ. ಈ ಬಾರಿ ಪ್ರಾಮಾಣಿಕತೆ ಮತ್ತು ಅಭಿವ್ರದ್ಧಿಗೆ ಮತ ಹಾಕುತ್ತಾರೆ ಅನ್ನೋ ನಂಬಿಕೆ ನನಗಿದೆ. ಸೋತ ಮೇಲೂ ಐದು ವರ್ಷಗಳ ಜನರ ನಡುವೆ ಇದ್ದು ಜನತೆಯ ಎಲ್ಲಾ ಆಶೋತ್ತರಗಳಿಗೆ ಸ್ಪಂದಿಸಿದೀನಿ. ನಾರಾಯಣಗುರುಗಳ ವಿಚಾರದಲ್ಲ ಜಿಲ್ಲೆಯಾದ್ಯಂತ ಬಹಳಷ್ಟು ಹೋರಾಟ ಸಂಘಟಿಸಿದ್ದೀನಿ.. ನಾರಾಯಣಗುರುಗಳ ಸ್ಥಬ್ಬ ಚಿತ್ರದ ವಿಚಾರದಲ್ಲಿ, ಪಠ್ಯ ಪುಸ್ತಕದ ವಿಚಾರದಲ್ಲಿ ಜಿಲ್ಲೆಯ ಮೂಲೆ ಮೂಲೆಯಲ್ಲಿ ಬಿಲ್ಲವ ಮುಖಂಡರ ಜೊತೆ ಇದ್ದು ಹೋರಾಟವನ್ನು ಸಂಘಟಿಸಿದ್ದೀನಿ. ಈ ಬಾರಿ ನನ್ನ ಕೊನೆಯಚುನಾವಣೆ.. ನನ್ನನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುತ್ತಿರಿ ಅನ್ನೊ ನಂಬಿಕರ ಇದೆ ಅಂತಾ ಸೊರಕೆ ಹೇಳಿದ್ದಾರೆ. ಒಂದು ವೇಳೆ ಗೆದ್ದು ಬಂದಲ್ಲಿ ಸಮಾಜದ ಎಲ್ಲಾ ವರ್ಗದವರ ಪರ ನಿಂತು ಸಮಾನತೆಯಿಂದ ಕೆಲಸ ಮಾಡ್ತಿನಿ ವಾಗ್ದಾನ ಮಾಡ್ತಿನಿ ಅಂತಾ ಸೊರಕೆ ಹೇಳಿದರು.

ಉದ್ಯಾವರ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಸತೀಶ್ ಕೋಟ್ಯಾನ್, ಕಾರ್ಯದರ್ಶಿ ಆನಂದ ಉದ್ಯಾವರ, ಯುವ ಜನ ಕಲಾಮಂಡಳಿ ಅಧ್ಯಕ್ಷ ಶಿವರಾಮ ಗುರಿಕಾರರರು, ಬಿಲ್ಲವ ಮಖಂಡರು , ಮಹಿಳಾ ಘಟಕದ ಎಲ್ಲಾ ಮುಖಂಡರು , ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

12 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

12 hours ago