ಕಾಪುವಿನಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌದ : ಶಾಸಕ ಲಾಲಾಜಿ ಆರ್ ಮೆಂಡನ್. ಕಾಪುವಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹೇಳಿಕೆ

ಕಾಪುವಿನಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ಮಿನಿ ವಿಧಾನಸೌದ : ಶಾಸಕ ಲಾಲಾಜಿ ಆರ್ ಮೆಂಡನ್.

ಕಾಪು: ಕಾಪು ತಾಲ್ಲೂಕು ಮಟ್ಟದ ರಾಷ್ಟ್ರೀಯ ನಾಡಹಬ್ಬ ಆಚರಣಾ ಸಮಿತಿ ಹಾಗೂ ತಹಶಿಲ್ದಾರ್ ಕಾಪು ತಾಲೂಕು ವತಿಯಿಂದ 71 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು.

ಧ್ವಜಾರೋಹಣಗೈದು ಕಾಪು ತಾಲೂಕು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ ” ಜಾತ್ಯತೀತ, ಸಾಮರಸ್ಯ ದ ಶಿಕ್ಷಣದ ಅಗತ್ಯ ಪ್ರಸ್ತುತ ಕಾಲಘಟ್ಟದಲ್ಲಿ ಅಗತ್ಯವಿದೆ,ಪ್ರತಿಯೊಬ್ಬ ಕೂಡ ಒಬ್ಬರನ್ನೊಬ್ಬರು ಅರಿತುಕೊಂಡು ಸಾಗುವ ನಾಗರಿಕತೆ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪುವಿನ ಶಾಸಕರು ಲಾಲಾಜಿ ಆರ್ ಮೆಂಡನ್ ಮಾತಾಡಿ ” ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಂವಿಧಾನ ಬದ್ದ ಆಡಳಿತ ಇದೆ ಮತ್ತು ಪೌರತ್ವ ಕಾಯ್ದೆಯ ಬಗ್ಗೆ ಯಾವುದೇ ಗೊಂದಲ ಅಗತ್ಯ ಇಲ್ಲ ಮೂಲ ಭಾರತೀಯರಿಗೆ ಯಾವುದೇ ರೀತಿಯ ಸಮಸ್ಯೆ ಈ ಕಾಯ್ದೆಯಿಂದ ಇಲ್ಲ ಎಂದರು.

ಮುಂದಿನ ಕೆಲವೇ ತಿಂಗಳುಗಳಲ್ಲಿ ಕಾಪುವಿಗೆ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಮಿನಿ ವಿಧಾನಸೌದ ಕ್ಕೆ ಶೀಘ್ರ ಮೂಹುರ್ತಕ್ಕೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲೆಯನ್ನು ಪ್ರತಿನಿಧಿಸಿದ ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಪ್ರತಿನಿಧಿಸಿ ಬಹುಮಾನ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಹಾಗೂ ಮುಖ್ಯಮಂತ್ರಿ ವೈದ್ಯಕೀಯ ಪರಿಹಾರ ನಿಧಿಯ ಚೆಕ್ಕನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ವೇದಿಕೆಯಲ್ಲಿ ಕಾಪು ಪುರಸಭಾ ಸದಸ್ಯರು, ಕಾಪು ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತಿತರಿದ್ದರು.

ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಸ್ವಾಗತಿಸಿ,ನಾಗರಾಜ್ ಕಾರ್ಯಕ್ರಮ ನಿರೂಪಿಸಿ, ಲೆಸ್ಟರ್ಡ್ ಕರ್ನಲಿಯೋ ವಂದಿಸಿದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago