ಕಾಪು: ಬಿಜೆಪಿ ಮತ್ತು ಜೆಡಿಎಸ್ ನ ಉಚ್ಚಿಲ ಭಾಗದ 50 ಕ್ಕೂ ಹೆಚ್ಚು ಜಿಲ್ಲಾ ಮತ್ತು ರಾಜ್ಯ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ, ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ ಅತೀಫ್ ದಾವೂದ್ ನೇತ್ರತ್ವದಲ್ಲಿ ಶಾಬಾನ್ ಉಚ್ಛಿಲ, ಗುರುಪ್ರಸಾದ್ ಭಟ್ ಉಚ್ಛಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು
ಬಿಜೆಪಿ ಮತ್ತು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸೇರ್ಪಡೆ ಗೊಂಡ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವಿನಯ್ ಕುಮಾರ್ ಸೊರಕೆ ಜಾತ್ಯಾತೀತ ನಿಲುವು ಹೊಂದಿದ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ದಿನದಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ವನ್ನು ನೀಡುವ ಭರವಸೆ ನೀಡಿದರು.
ಕೆಪಿಸಿಸಿ ಕಾರ್ಯದರ್ಶಿ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಮುಖಂಡರಾದ ಇಮ್ರಾನ್, ಲೋಕೇಶ್ ಅಂಚನ್, ರಫೀಕ್, ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…