ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಟಿ20 ವಿಶ್ವಕಪ್ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ಈ ವೇಳೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ಇನ್ನು ಕಾಪು ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.
ಅದರಂತೆ ಮಂಗಳವಾರ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಹಾಗೂ ದೇವಿಶಾ ಮಾರಿಗುಡಿ ದೇವಸ್ಥಾನದಲ್ಲಿ ಹರಕೆ ತೀರಿಸಿ ತೆರಳಿದ್ದಾರೆ. ಇದೀಗ ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…