ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್. ಶೆಟ್ಟಿ (59) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಾಕುಪುತ್ರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಾಕುಪುತ್ರಿ ಮನೆ ಬಿಟ್ಟು ಹೋದ ವಿಷಯಕ್ಕೆ ನೊಂದು ಈ ದಂಪತಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಲೀಲಾಧರ ಶೆಟ್ಟಿ ದಂಪತಿಯ ಸಾಕು ಮಗಳು ಈ ಹಿಂದೆ ಮನೆ ಕೆಲಸಕ್ಕೆಂದು ಬಂದಿದ್ದಾತನೊಂದಿಗೆ ತೆರಳಿರುವ ಶಂಕೆ ವ್ಯಕ್ತ ಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರಂತೆ ಆಕೆಯ ಪತ್ತೆಗಾಗಿ ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದು, ಎರಡು ತಂಡಗಳನ್ನು ರಚಿಸಿದ್ದಾರೆ. ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲೂ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡೆತ್ ನೋಟ್‌ನಲ್ಲಿ ಏನೇನಿತ್ತು ?
ಲೀಲಾಧರ ಶೆಟ್ಟಿ ಅವರು ಸಾವಿಗೆ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು ಅದರ ವಿವರ ಅಧಿಕೃತವಾಗಿ ಬಹಿರಂಗವಾಗಿಲ್ಲ. “ನನ್ನನ್ನು ಕ್ಷಮಿಸಿ, ಪ್ರಾಣಕ್ಕಿಂತ ಮಾನ ಮುಖ್ಯ. ಯಾರ್ಯಾರಿಗೆ ಎಷ್ಟು ಸಾಲ ಕೊಡಬೇಕಿದೆ ಮತ್ತು ಅವರ ದೂರವಾಣಿ ಸಂಖ್ಯೆ ಇಲ್ಲಿದೆ. ಎಲ್‌ಐಸಿ ಕಮೀಷನ್‌ನಿಂದ ಬರುವ ಹಣದಲ್ಲಿ ಸಂದಾಯ ಮಾಡಿ. ತಾನು ಕಲಿತ ಕರಂದಾಡಿ ಶಾಲೆಯನ್ನು ಅಭಿವೃದ್ಧಿ ಪಡಿಸಿ, ಅಲ್ಲಿನ ಮಕ್ಕಳ ಬಗ್ಗೆ ಪ್ರೀತಿ ತೋರಿ. ಬಾಕಿ ಇರುವ ಊರಿನ ವಿವಿಧ ಅಭಿವೃದ್ಧಿ ಕೆಲಸಗಳನ್ನು ಶೀಘ್ರ ಮುಗಿಸಿ’ ಎಂದು ಪತ್ರದಲ್ಲಿ ಬರೆದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…