ಕಾಪು : ಮಂಗಳವಾರ ಮಲ್ಲಾರು ಗುಡ್ಡೆಕೇರಿಯಲ್ಲಿನ ಅಕ್ರಮ ಜಾನವಾರು ವಧಾ ಕೇಂದ್ರಕ್ಕೆ ಧಾಳಿ ನಡೆಸಿದ ಕಾಪು ಪೊಲೀಸರು ಕಟುಕರ ಕೈಗೆ ಬಲಿಯಾಗಬೇಕಿದ್ದ 10 ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆಯ ವೇಳೆ 31 ಸಾವಿರ ಮೌಲ್ಯದ ಹತ್ತು ದನ – ಕರುಗಳು ಮತ್ತು ವಧೆಗೆ ಬಳಸುತ್ತಿದ್ದ ಸಾಮಾಗ್ರಿಗಳು ಹಾಗೂ ಆರೋಪಿಗಳು ನಿಲ್ಲಿಸಿದ್ದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.
ಕಾಪು ಎಸ್‌ಐ ರಾಜಶೇಖರ್ ಬಿ. ಸಾಗನೂರು ಅವರಿಗೆ ಬೀಟ್ ಪೊಲೀಸ್ ಸಿಬಂದಿಯ ಮೂಲಕ ದೊರಕಿದ ಖಚಿತ ಮಾಹಿತಿಯ ಮೇರೆಗೆ ಸಿಬಂದಿಗಳಾದ ರವೀಂದ್ರ, ಅರುಣ್, ಮಂಜುನಾಥ, ಆನಂದ್, ಸಂದೇಶ, ಪರಶುರಾಮ ಅವರು ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದರು.
ಅಕ್ರಮ ವಧಾ ಕೇಂದ್ರವನ್ನು ನಡೆಸುತ್ತಿದ್ದ ಅಬ್ದುಲ್ ಸತ್ತಾರ್, ನಾಜಿಮ್, ಶಂಶುದ್ದೀನ್, ಹಸನಬ್ಬ, ಶಾಹಿದ್, ಆರಿಫ್ ಸಹಿತ ಸ್ಥಳದಲ್ಲಿದ್ದ ಎಂಟು ಮಂದಿ ಆರೋಪಿಗಳು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ. ಪೊಲೀಸರು ರಕ್ಷಿಸಿದ ದನಗಳನ್ನು ನೀಲಾವರ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…