ಕಾಪು : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಯನ್ನು ಶಿರ್ವ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಾಪು ತಾಲೂಕಿನ ಶಿರ್ವ ಗ್ರಾಮದ ಗರಡಿ ಮನೆಯಲ್ಲಿರುವ ಪಾಪನಾಶಿನಿ ಹೊಳೆ ಬಳಿಯ ಸರ್ಕಾರಿ ಜಮೀನಿನ ಬಳಿ ಅಕ್ರಮ ಮರಳು ಸಾಗಾಟ ಮಾಡುವ ಕುರಿತು ಮಾಹಿತಿ ಪಡೆದ ಶಿರ್ವ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಿಟಾಚಿ ಅಗೆಯುವ ಯಂತ್ರದ ಸಹಾಯದಿಂದ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ.
ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಮರಳು ತುಂಬಿದ್ದ ಎರಡು ಟಿಪ್ಪರ್ ಲಾರಿಗಳು ಮತ್ತು ಒಂದು ಅಗೆಯುವ ಯಂತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಎಸ್ಪಿ ಸುಧಾಕರ್ ಎಸ್ ನಾಯಕ್, ಕಾರ್ಕಳ ಎಎಸ್ಪಿ ಡಾ. ಹರ್ಷ ಪ್ರಿಯಂವದ, ಐಪಿಎಸ್ ಮತ್ತು ಕಾಪು ವೃತ್ತ ನಿರೀಕ್ಷಕ ಜಯಶ್ರೀ ಮಾನೆ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…