ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ
ಕಾಪು: ಕಾಪು ಕಡಲ ಕಿನಾರೆಯಲ್ಲಿ ತಮಿಳುನಾಡು ಮೂಲದ ಮೀನುಗಾರರ ದೋಣಿ ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು, ಇಬ್ಬರು ಮೀನುಗಾರರು ಸಮುದ್ರಕ್ಕೆ ಬಿದ್ದು ಒಬ್ಬರು ನಾಪತ್ತೆಯಾಗಿರುವ ಘಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ತೀವ್ರ ಖಂಡನೆ ವ್ಯಕ್ತಪಡಿಸುತ್ತದೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಅಜಿರ್ (ಪಾಚ್ಚಾಲೆ) ಮೀನುಗಾರಿಕೆ ನಡೆಸುತ್ತಿರುವುದಾಗಿ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಶಾಂತಿಯುತವಾಗಿ ಅವರೊಂದಿಗೆ ಮಾತನಾಡಲು ತೆರಳಿದ ಸಂದರ್ಭದಲ್ಲಿ ಈ ರೀತಿಯ ಕ್ರೂರ ಹಾಗೂ ಅಮಾನುಷ ಕೃತ್ಯ ಎಸಗಿರುವುದು ಅತ್ಯಂತ ಖಂಡನೀಯವಾಗಿದೆ.
ಇದನ್ನೂ ಓದಿ:
ಈ ಘಟನೆಯ ಪರಿಣಾಮವಾಗಿ ಸ್ಥಳೀಯ ಮೀನುಗಾರರ ದೋಣಿ ಮುಗುಚಿ, ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು, ಒಬ್ಬರನ್ನು ರಕ್ಷಿಸಲಾಗಿದ್ದರೂ ಇನ್ನೊಬ್ಬ ಮೀನುಗಾರ ಇನ್ನೂ ನಾಪತ್ತೆಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ.
ಈ ಹಿನ್ನೆಲೆಯಲ್ಲಿ, ಎಸ್ ಡಿ ಪಿ ಐ ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳನ್ನು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತದೆ. ನಾಪತ್ತೆಯಾಗಿರುವ ಮೀನುಗಾರರಿಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಿ, ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಅಕ್ರಮ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದರೊಂದಿಗೆ ಸ್ಥಳೀಯ ಮೀನುಗಾರರ ಭದ್ರತೆಯನ್ನು ಖಚಿತಪಡಿಸಬೇಕು.
ಪಕ್ಷವು ಪೀಡಿತ ಕುಟುಂಬದ ಜೊತೆ ನಿಂತಿದ್ದು, ಅವರಿಗೆ ಅಗತ್ಯ ಪರಿಹಾರ ಮತ್ತು ಸಹಾಯವನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಎಸ್ ಡಿ ಪಿ ಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾದಿಕ್ ಕೆ ಪಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:
ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24
