ಕಾಪು: ಅಡಿಕೆ ಕೊಯ್ಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು – vishwanews24

Featured, ಉಡುಪಿ

ಕಾಪು: ಅಡಿಕೆ ಕೊಯ್ಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು

ಕಾಪು : ತೋಟದಲ್ಲಿ ಅಡಿಕೆ ಕೊಯುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ್ದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ ಮೂಲದ ಕಾರ್ಮಿಕ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.ಅಡಿಕೆ ತೆಗೆಯಲು ಹೋಗಿದ್ದ ಯುವಕ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ ಈ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿ ಯುವಕನ ಸಾವಿಗೆ ಕಾರಣವಾಗಿದೆ.

ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply