ಕಾಪು: ಉಳಿಯಾರಗೋಳಿ ಗ್ರಾಮದ ಬಳಿ ಎ.3 ರಂದು ಬೆಳಗ್ಗೆ ಅನುಮತಿ ಪಡೆಯದೆ ಕಾರಿನಲ್ಲಿ ಬಿಜೆಪಿ ಧ್ವಜವನ್ನು ಕಟ್ಟಿಕೊಂಡು ಚುನಾವಣಾ ಪ್ರಚಾರ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿ ಚುನಾವಣೆಗೆ ಸಂಬಧಿಸಿದ ಬಾವುಟ ಹಾಗೂ ಇತರ ವಸ್ತುಗಳನ್ನು ಸಾಗಾಟ ಮಾಡಲು ಸಿದ್ಧವಾಗುತ್ತಿರುವ ಬಗ್ಗೆ ಸಿವಿಜಿಲ್ ಆ್ಯಪ್‌ನಲ್ಲಿ ದೂರು ಬಂದಿದ್ದು, ಅದರಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಉಮೇಶ್ ತಂಡ ಕಾರ್ಯಾಚರಣೆ ನಡೆಸಿತ್ತು.
ಚಾಲಕ ಕಾರನ್ನು ಕಮಲದ ಚಿಹ್ನೆ ಇರುವ ದೊಡ್ಡ ಬಾವುಟವನ್ನು ನೊಂದಣಿ ನಂಬ್ರ ಕಾಣದಂತೆ ಕಟ್ಟಿಕೊಂಡು ರಸ್ತೆಯಲ್ಲಿ ತೀವ್ರ ನಿರ್ಲಕ್ಷ್ಯತನ ಹಾಗೂ ದುಡುಕುತನದಿಂದ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದು, ಫ್ಲೈಯಿಂಗ್ ಸ್ಕ್ವಾಡ್‌ನ ಕಾರು ಹತ್ತಿರಕ್ಕೆ ಹೋಗುತ್ತಿದ್ದಂತೆ ಅದರ ಚಾಲಕನು ಮಾಳವಿಕಾ ರೆಸಿಡೆನ್ಸಿ ಎದುರಿನ ಅಂಗಳದಲ್ಲಿ ಕಾರನ್ನು ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.
ಕಾರಿನ ಚಾಲಕನು ಪಕ್ಷದ ಚಿಹ್ನೆಗಳನ್ನು ಬಳಸಿ ಚುನಾವಣಾ ಪ್ರಚಾರ ಮಾಡಲು ಚುನಾವಣಾಧಿಕಾರಿಗಳಿಂದ ಯಾವುದೇ ಅನುಮತಿಯನ್ನು ಪಡೆದುಕೊಳ್ಳದೇ, ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…