ಕಾಪು: ಕಾಪು ಪೇಟೆ ನ್ಯಾಯಬೆಲೆ ಅಂಗಡಿ ಸಮೀಪ ಮಾ.14 ರಂದು ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಜಮಾಡಿಯ ಕಲಂದರ್ ಶಾಫಿ(43) ಹಾಗೂ ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ಉಬೈದುಲ್ಲ(31) ಬಂಧಿತ ಆರೋಪಿಗಳು. ಕಾಪು ಆಹಾರ ನಿರೀಕ್ಷಕ ಎಂ.ಟಿ.ಲೀಲಾನಂದ ನೇತೃತ್ವದಲ್ಲಿ ದಾಳಿ ನಡೆಸಿದಾಗ ಇವರು ಪಡಿತರ ದಾರರಿಗೆ ವಿತರಿಸುತ್ತಿರುವ ಸುಮಾರು 8,500ರೂ. ಮೌಲ್ಯದ 250 ಕೆ.ಜಿ. ಅಕ್ಕಿಯನ್ನು 6 ಚೀಲಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದು ಕಂಡು ಬಂದಿತ್ತು.
ಇವರು ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಪಡಿತರದಾರರಿಂದ ಕೆ.ಜಿ ಅಕ್ಕಿಗೆ 20ರೂ.ನಂತೆ ಖರೀದಿಸಿದ್ದು, ಅದನ್ನು ಮುದರಂಗಡಿ ಪ್ರತಾಪ್ ಎಂಬವರಿಗೆ ಮಾರಾಟ ಮಾಡಲು ತೆಗೆದು ಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…