Featured

ಕಾಪು: ಅನ್ನಭಾಗ್ಯದ ಅಕ್ಕಿ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ : ಮೂವರ ಬಂಧನ -Vishwanews24

ಕಾಪು: ಅನ್ನಭಾಗ್ಯದ ಅಕ್ಕಿ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ : ಮೂವರ ಬಂಧನ -Vishwanews24

ಕಾಪು: ಮನೆ ಮನೆಯಿಂದ ಅನ್ನಭಾಗ್ಯದ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತಿದ್ದ ಕಾಪು ಪೊಲೀಸರು ಹಾಗೂ ಆಹಾರ ನಿರೀಕ್ಷಕರ ತಂಡ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಮೂಡು ಗೋಪಾಡಿ ಬಿಜಾಡಿಯ ಇಮ್ತಿಯಾಜ್ ಅಹಮ್ಮದ್, ಕುಂದಾಪುರದ ಮಾವಿನ ಕಟ್ಟೆ ಕುರ್ಕುಂಜೆ ನಿವಾಸಿ ಮಹಮ್ಮದ್ ನಾಸೀರ್, ಕೋಟೇಶ್ವರದ ಹಳೆ ಅಳಿವೆ ನಿವಾಸಿ ಮಹಮ್ಮದ್ ತಯೂಬ್ ಎಂದು ಪೊಲೀಸರು ತಿಳಿಸಿರುತ್ತಾರೆ.

ಆಹಾರ ನಿರೀಕ್ಷಕ. ಟಿ. ಲೀಲಾನಂದ ದೂರಿನ ಮೇರೆಗೆ ಭಾನುವಾರ ಕೋಟೆ ಗ್ರಾಮದ ಸುಮಿತ್ರಾ ಜನರಲ್ ಸ್ಟೋರ್ ಸಮೀಪ ಕಾರ್ಯಾಚರಣೆ ನಡೆಸುತಿದ್ದಾಗ ಕಾರನ್ನು ತಡೆದು ನಿಲ್ಲಿಸಿದಾಗ ಅದರಲ್ಲಿದ್ದ ಚಾಲಕನು, ಚಾಲಕನ ಪಕ್ಕದ ಸೀಟಿನಲ್ಲಿ ಮತ್ತು ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದವನು, ಓಡಲು ಯತ್ನಿಸಿದ್ದರು.

ಪೊಲೀಸರು ಅವರನ್ನು ಹಿಡಿದು ಕಾರನ್ನು ಪರಿಶೀಲಿಸಿದಾಗ ಚಾಲಕನ ಸೀಟಿನ ಹಿಂಬದಿಯಲ್ಲಿ ಪ್ಲಾಸ್ಟಿಕ್‌ ಚೀಲಗಳು ಕಂಡುಬಂತು. ಇದರಲ್ಲಿ ಅಕ್ಕಿ ತುಂಬಿದ 16 ಚೀಲಗಳಿದ್ದು, ಪ್ರತಿಯೊಂದು ಚೀಲವು 35 ಕೆ.ಜಿ . ತೂಕವಿದ್ದು ಒಟ್ಟು 560 ಕೆ.ಜಿ. ಕಂಡುಬಂತು. ಆರೋಪಿಗಳು ಮನೆ ಮನೆಗೆ ಹೋಗಿ ಸರಕಾರದಿಂದ ಉಚಿತವಾಗಿ ದೊರೆಯುವ ಅಕ್ಕಿಯನ್ನು ಖರೀದಿಸಿ ಹೆಚ್ಚು ಬೆಲೆಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ತಿಳಿಸಿರುತ್ತಾರೆ .

Vishwa News 24

Recent Posts

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

46 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

59 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago