ಕಾಪು : ಇಲ್ಲಿನ ಪೊಲಿಪುವಿನ ನಿವಾಸಿ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿಯವರು ಗುರುವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರೀತೇಶ್ ರವರು ನಾಲ್ಕು ದಿನದ ಹಿಂದೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ತೀವ್ರ ಗಾಯಗೊಂಡ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಪ್ರೀತೇಶ್ ರವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.
ಪ್ರೀತಿಶ್ ರವರು ಕಾಪು ಛಾಯಾಗ್ರಹಕ ಸಂಘದ ಅಜೀವ ಸದಸ್ಯರಾಗಿದ್ದು, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.
ಪ್ರೀತೇಶ್ ರವರು ತಂದೆ ತಾಯಿ ಹೆಂಡತಿ ಮಗಳು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಾಪು ಛಾಯಾಗ್ರಾಹಕ ಸಂಘದ ಅಧ್ಯಕ್ಷ ವಿನೋದ್ ಕಾಂಚನ್ ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…