ಕಾಪು : ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅತೀ ಅಗತ್ಯ : ಸುಷ್ಮಾ -Vishwanews24

Featured, ಉಡುಪಿ

ಕಾಪು : ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅತೀ ಅಗತ್ಯ : ಸುಷ್ಮಾ -Vishwanews24

ಕಾಪು : ಅಂತರಾಷ್ಟ್ರೀಯ ಮಾದಕ ವಸ್ತು ಹಾಗೂ ಅಕ್ರಮ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಕಾಪು ಪೊಲೀಸ್ ಠಾಣೆಯ ನೇತೃತ್ವ ದಲ್ಲಿ ಮಾದಕ ವ್ಯಸನದಿಂದ ಉಂಟಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಪು ಪೇಟೆಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಮಾತನಾಡಿದ ಪ್ರೊಬೆಷನರಿ ಪಿ. ಎಸ್. ಐ ಸುಷ್ಮಾ ಮಾತನಾಡಿ ಮಾದಕವಸ್ತು ಸೇವನೆಯಿಂದ ಯುವಜನಾಂಗ ಹಾಳಾಗುತ್ತಿದ್ದು ತಮ್ಮ ಜೀವನವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಮ್ಮಿಂದ ಆಗಬೇಕಿದೆ ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸಿ ಆರೋಗ್ಯ ಕರ ಸಮಾಜ ನಿರ್ಮಿಸಲು ನಾವೆಲ್ಲ ಶ್ರಮಿಸಬೇಕಿದೆ ಹಾಗೂ ತಮ್ಮ ಸುತ್ತ ಮುತ್ತ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸ ರೊಂದಿಗೆ ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದರು.

ಈ ಸಂದರ್ಭ ಎ.ಎಸ್. ಐ. ರಾಜೇಂದ್ರ ಮಣಿಯಾನಿ, ರಮೇಶ್ ಕುಮಾರ್ , ಮನು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.