ಕಾಪು: ಉತ್ತರ ಪ್ರದೇಶ ಮೂಲದ ಕಾರ್ಮಿಕನೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿ ಆ ಬಳಿಕ ಪರಾರಿಯಾಗಿರುವ ಘಟನೆ ಕಾಪುವಿನಲ್ಲಿ ನಡೆದಿದೆ.ಕಾಪುವಿನ ಸೆಲೂನ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಶಾರುಖ್ ಖಾನ್ ಆರೋಪಿತ.
ಆರೋಪಿ ಪತ್ನಿಯ ಜತೆಗೆ ಕಾಪುವಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ. ಈ ನಡುವೆ ಆರೋಪಿ ಶಾರೂಖ್, ತನಗೆ ಮತ್ತು ಪತ್ನಿಗೆ ಆಶ್ರಯ ನೀಡಿದ್ದ ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳನ್ನು ಪುಸಲಾಯಿಸಿ ದೈಹಿಕ ಸಂಬಂಧ ಬೆಳೆಸಿದ್ದನು. ಈ ಬಗ್ಗೆ ಬಾಲಕಿಯೂ ಬಾಯಿ ಬಿಟ್ಟಿರಲಿಲ್ಲ. ಈ ನಡುವೆ ಬಾಲಕಿಯಲ್ಲಾದ ದೈಹಿಕ ಬದಲಾವಣೆಯನ್ನು ಕಂಡು ಆಕೆಯ ತಾಯಿ ವೈದ್ಯರಲ್ಲಿ ಪರೀಕ್ಷೆಗೆ ಕರೆದೊಯ್ದಾಗ ಅಲ್ಲಿ ಬಾಲಕಿ ಗರ್ಭೀಣಿಯಾಗಿರುವ ಮಾಹಿತಿ ದೊರಕಿದೆ.
ಪ್ರಕರಣ ಬೆಳಕಿಗೆ ಬರುತ್ತಲೇ ಮನೆಯವರು ಆರೋಪಿಗಾಗಿ ಹುಡುಕಾಟ ನಡೆಸಿದ್ದು ಆತ ತನ್ನ ಊರಿಗೆ ಮರಳಿ ಹೋಗಿರುವ ವಿಚಾರ ಬೆಳಕಿಗೆ ಬಂದಿದ್ದು ಮನೆಯವರು ಕಾಪು ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…