ಕಾಪು: ಕಾಪು ಸೀಮೆಯ ಆರಾಧ್ಯ ದೇವತೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸುತ್ತುಪೌಳಿಯ ಜೀರ್ಣೋದ್ಧಾರದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ನಿಧಿ ಸ್ಥಾಪನೆ – ಮುಷ್ಟಿ ಕಾಣಿಕೆ ಸಮರ್ಪಣೆ – ಮಹಾಸಂಕಲ್ಪ ಅಭಿಯಾನ ಪ್ರಾರಂಭಗೊಳ್ಳಲಿದೆ.
ದೇವಸ್ಥಾನದ ಎಂಟು ದಶಕಗಳ ಹಳೆಯ ವಾಸ್ತುವಿನ ಸುತ್ತುಪೌಳಿ ಪ್ರಸ್ತುತ ಜೀರ್ಣಾವಸ್ಥೆಯಲ್ಲಿದ್ದು ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿ ಶ್ರೀಮತ್ ಸಂಯಮೀಂದ್ರತೀರ್ಥ ಶ್ರೀಪಾದರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ಸುತ್ತುಪೌಳಿಯ ಸಮಗ್ರ ಜೀರ್ಣೋದ್ಧಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ನವರಾತ್ರಿಯ ಮೊದಲ ದಿನ ಬೆಳಗ್ಗೆ ಒಡೆಯ ವೆಂಕಟರಮಣ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಬಳಿಕ ಬೆಳಗ್ಗೆ 9 ಗಂಟೆಗೆ ಮಾರಿಯಮ್ಮ ದೇವಸ್ಥಾನದಲ್ಲಿ ಜೀರ್ಣೋದ್ಧಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾ ಸಂಕಲ್ಪಕ್ಕೆ ಚಾಲನೆ ನೀಡಲಿದ್ದಾರೆ.
ಅ. 17ರ ವರೆಗೆ ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಪ್ರಸಾದ್ ಗೋಕುಲ್‌ದಾಸ್ ಶೆಣೈ ಮತ್ತು ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…