ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ ನಡೆದ ಆಟೋ ರಿಕ್ಷಾ ಮತ್ತು ಟೆಂಪೋ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
ಉಚ್ಚಿಲದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಆಟೋ ರಿಕ್ಷಾಗೆ, ರಸ್ತೆಬದಿಯ ಬ್ಯಾನರ್ ತೆರವುಗೊಳಿಸಲು ಬಳಸಲಾಗುತ್ತಿದ್ದ ಕಾಪು ಪುರಸಭೆಯ ಟೆಂಪೋ ಡಿಕ್ಕಿ ಹೊಡೆದಿತ್ತು. ಅಪಘಾತದ ವೇಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಉಚ್ಚಿಲ ನಿವಾಸಿ ಸಂಧ್ಯಾ ಹಾಗೂ ಅವರ ಮಕ್ಕಳಾದ ಗಾಯನ್ ಮತ್ತು ಸುವಿತ್ ಗಾಯಗೊಂಡಿದ್ದರು.
ಗಾಯಾಳುಗಳಲ್ಲಿ ಒಂದೂವರೆ ವರ್ಷದ ಮಗು ಸುವಿತ್ ಪರಿಸ್ಥಿತಿ ತೀರಾ ಗಂಭೀರವಾಗಿತ್ತು. ಉಡುಪಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…