ಉಡುಪಿ: ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 17ರಂದು ಕೊನೆಯುಸಿರೆಳೆದಿದ್ದಾರೆ.
ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.
ಅಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಅವರು ನ. 17ರಂದು ಮೃತಪಟ್ಟಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…