ಕಾಪು : ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು.
ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಕಾಪು ಎಎಸ್‌ಐ ರವೀಶ್ ಹೊಳ್ಳ ಅವರು ಹೆಡ್ ಕಾನ್‌ಸ್ಟೆಬಲ್‌ಗಳಾದ ಮೊಹಮ್ಮದ್ ರಫೀಕ್ ಮತ್ತು ಸುಲೋಚನಾ ಅವರೊಂದಿಗೆ ಆಗಸ್ಟ್ 18 ರಂದು ಮುಂಬೈನಲ್ಲಿ ಸಿಯಾನ್‌ನಲ್ಲಿ ಅನುರಾಧಾಳನ್ನು ಬಂಧಿಸಿದ್ದಾರೆ.
ಅನುರಾಧ ಅವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ 15 ಸಾವಿರ ರೂ. ದಂಡ ವಿಧಿಸಿದೆ. ಆಗಸ್ಟ್ 21ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…