ಕಾಪು : ಎರಡು ವರ್ಷಕ್ಕೊಮ್ಮೆ ಮಹತ್ವಪೂರ್ಣವಾಗಿ ನಡೆಯುವ ಕಾಪುವಿನ ಪಿಲಿಕೋಲಕ್ಕೆ ಇಂದು ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಹತ್ತಿರದ ಕೆರೆಯಲ್ಲಿ ಪಿಲಿದೈವ ನರ್ತಕ ಸ್ನಾನಾದಿ ಕಾರ್ಯ ಮುಗಿಸಿ ಬಳಿಕ ದೈವಸ್ಥಾನದ ಮುಂಭಾಗದಲ್ಲಿ ತೆಂಗಿನ ಗರಿಗಳಿಂದ ತಯಾರಿಸಲಾದ ಸಿರಿಯಿಂದ ಮಾಡಿದ ಗುಂಡದೊಳಗೆ ಹುಲಿವೇಷದ ಬಣ್ಣಗಾರಿಕೆ ನಡೆಯುತ್ತದೆ.
ಈ ವೇಳೆ ಗುಂಡದೊಳಗೆ ಹಾಗೂ ಸುತ್ತಮುತ್ತ ಯಾರೂ ಪ್ರವೇಶ ಮಾಡುವಂತಿಲ್ಲ. ಹುಲಿವೇಷದ ಬಣ್ಣಗಾರಿಕೆಯೊಂದಿಗೆ ವಿಚಿತ್ರವಾಗಿ ಹುಲಿಯಂತೆ ಆರ್ಭಟಿಸುತ್ತ ಒಲಿಗುಂಡದಿಂದ ವೇಷಧಾರಿ ವೈಭವದಿಂದ ಹೊರಬರುವ ಮೂಲಕ ಪಿಲಿಕೋಲಕ್ಕೆ ಚಾಲನೆ ದೊರೆಯುತ್ತದೆ. ಹುಲಿ ಬೇಟೆಯ ಜೊತೆಗೆ ಗ್ರಾಮ ಸಂಚಾರಕ್ಕೆ ಹೊರಟು ಹಳೆ ಮಾರಿಗುಡಿ ಮುಂಭಾಗದ ಬಾಳೆಯ ಗರುಡ- ಗಂಬವನ್ನು ಮುರಿಯುವ ಹುಲಿ ವೇಷಧಾರಿ, ಜೀವಂತ ಕೋಳಿಯ ರಕ್ತ ಹೀರುವ ಸನ್ನಿವೇಶ ಮೈ ಜುಮ್ಮೆನಿಸುತ್ತದೆ. ಈ ಸಮಯದಲ್ಲಿ ಹುಲಿಯ ಅರ್ಭಟ, ಹಾರಾಟ ಮೈನವಿರೇಳಿಸುತ್ತದೆ.
ಕಾರಣಿಕ ಹಾಗೂ ದೈವಿಕ ಹಿನ್ನೆಲೆ ಹೊಂದಿರುವ ಪಿಲಿಭೂತ ಕೋಲದಲ್ಲಿ ಹುಲಿ ಮುಟ್ಟಿದರೆ ಮರಣ ಭೀತಿಯ ನಂಬಿಕೆ ಇರುವುದರಿಂದ ಪಿಲಿಕೋಲವನ್ನು ಸಾಕಷ್ಟು ದೂರದಲ್ಲಿ ನಿಂತು ಜನರು ವೀಕ್ಷಿಸುತ್ತಾರೆ. ಕಾಪು ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಈ ಅವಧಿಯಲ್ಲಿ ಪಿಲಿಕೋಲ ಮಾತ್ರವಲ್ಲದೆ ಮುಗ್ಗೇರ್ಕಳ, ತನ್ನಿಮಾನಿಗ, ಬಬ್ಬರ್ಯ, ಗುಳಿಗ ಹಾಗೂ ಪರಿವಾರ ದೈವಗಳ ನೇಮೋತ್ಸವವೂ ನಡೆಯುತ್ತದೆ. ಆದರೆ, ಕೊನೆಯಲ್ಲಿ ನಡೆಯುವ ಪಿಲಿಕೋಲವನ್ನು ನೋಡಲು ಜನಸಾಗರವೇ ಹರಿದು ಬರುವುದು ವಿಶೇಷ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…