Featured

ಕಾಪು‌ :ಇನ್ನಂಜೆ ರೋಟರಿ ಸಮುದಾಯ ದಳ- ದಾನಿಗಳ ನೆರವಿನ “ಶ್ರೀ ಭ್ರಾಮರಿ” ಗೃಹ ಹಸ್ತಾಂತರ – Vishwanews24

ಕಾಪು‌ :ಇನ್ನಂಜೆ ರೋಟರಿ ಸಮುದಾಯ ದಳ, ದಾನಿಗಳ ನೆರವಿನ “ಶ್ರೀ ಭ್ರಾಮರಿ” ಗೃಹ ಹಸ್ತಾಂತರ

ಕಾಪು‌ : ನಮ್ಮ ದೇಶದಲ್ಲಿ ಬಡ ಜನರಿದ್ದಾರೆ. ಅದೇ ರೀತಿ ಶ್ರೀಮಂತರೂ ಇದ್ದಾರೆ. ಬಡಜನರ ಆಲೋಚನಾ ಕ್ರಮದಂತೆ ಶ್ರೀಮಂತರ ಆಲೋಚನೆ ಮಾಡಿದರೆ ದೇಶದ ಬಡತನ ನಿರ್ಮೂಲನವಾಗಲು ಸಾಧ್ಯ. ಇನ್ನಂಜೆ ರೋಟರಿಯ ಕಾರ್ಯ ಶ್ಲಾಘನೀಯ. ಈ ಕಾರ್ಯಕ್ಕೆ ಕೈಜೋಡಿಸಿದ ದಾನಿಗಳಿಗೂ ಅಭಿನಂದನೆಗಳು ಎಂದು ಮಹಾಲಕ್ಷ್ಮೀ ಕೋ. ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಹೇಳಿದರು.

ಅವರು ಇನ್ನಂಜೆ ರೋಟರಿ ಸಮುದಾಯ ದಳದ ನೇತೃತ್ವದಲ್ಲಿ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಸುಮಾರು ೯ ಲಕ್ಷ ರೂಪಾಯಿ ವೆಚ್ಚದಲ್ಲಿ ಇನ್ನಂಜೆ ಕಲ್ಯಾಲುವಿನಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಭ್ರಾಮರಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು.

 

ಈ ಸಂದರ್ಭದಲ್ಲಿ ರೋಟರಿ ಸಮುದಾಯದಳದ ಗೌರವ ಸಲಹೆಗಾರ ನವೀನ್ ಅಮೀನ್ ಶಂಕರಪುರ,ಉದ್ಯಮಿ ಶ್ರೀಶ ನಾಯಕ್ ಪೆರ್ಣಂಕಿಲ, ಸಾಮಾಜಿಕ ಕಾರ್ಯಕರ್ತ ಶಶಿಧರ್ ಆಚಾರ್ಯ, ಶಂಕರಪುರ ಜೇಸಿಐ ಅಧ್ಯಕ್ಷ ಜಗದೀಶ್ ಅಮೀನ್, ರೋಟರಿ ಕ್ಲಬ್ ಅಧ್ಯಕ್ಷ ಗ್ಲಾಡ್ಸನ್ ಕುಂದರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೀಜನೆಯ ಮೇಲ್ವಿಚಾರಕಿ ಮಮತಾ, ಇನ್ನಂಜೆ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯ ನಿರ್ವಹಣಾಽಕಾರಿ ಸುಬ್ರಹ್ಮಣ್ಯ ಭಟ್, ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ, ಕೃಷ್ಣ ಅಮೀನ್, ಯುವಕ ಮಂಡಲದ ಅಧ್ಯಕ್ಷ ಉಮೇಶ್ ಆಚಾರ್ಯ, ಗ್ರಾ.ಪಂ. ಸದಸ್ಯರಾದ ದಿವೇಶ್ ಶೆಟ್ಟಿ, ಸುರೇಖಾ ಶೆಟ್ಟಿ, ಸವಿತಾ ಶೆಟ್ಟಿ,ವೈ ಎಸ್ ಎಮ್ ಫ್ರೆಂಡ್ಸ್, ಮಡುಂಬು ತಂಡದ ಅಧ್ಯಕ್ಷ ಸುನಿಲ್ ಸಾಲ್ಯಾನ್, ಇಂಜಿನಿಯರ್ ಸುಧಾಕರ್ ಅಂಚನ್, ವಿಕ್ಟರ್ ಮಾರ್ಟಿಸ್, ಚಂದ್ರ ಪೂಜಾರಿ, ಫ್ಲಾವಿಯಾ ಮಿನೇಜಸ್, ಲಕ್ಷ್ಮಣ್ ಪೂಜಾರಿ, ಸಿಲ್ವಿಯಾ ಕೆಸ್ತಲಿನೋ, ಅನಿಲ್ಡಾ ನೊರೋನ್ಹ, ಸಂತೋಷ್ ಕುಮಾರ್, ಪ್ರಶಾಂತ್ ಶೆಟ್ಟಿ ಕಲ್ಲಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಇನ್ನಂಜೆ ರೋಟರಿ ಸಮುದಾಯ ದಳದ ಸಭಾಪತಿ ಮಾಲಿನಿ ಶೆಟ್ಟಿ ಪ್ರಸ್ತಾವನೆಗೈದರು. ಸಮುದಾಯ ದಳದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮನೋಹರ್ ಕಲ್ಲುಗುಡ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago