ಉಚ್ಚಿಲ : ಇತ್ತೀಚೆಗೆ ನವಿಕೃತಗೊಂಡ ಉಡುಪಿ ಕಾಪುವಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.
ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಕಾಪು : ಬೈಕ್ ಡಿಕ್ಕಿ – ಪಾದಚಾರಿ ಸಾವು – Vishwanews24
ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರು ದೇವಳದ ವತಿಯಿಂದ ಗೃಹ ಸಚಿವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು. ಈ ಸಂದರ್ಭ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲಿಯನ್, ಮಹಾಜನ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಜಾನಕಿ ಲೀಲಾಧರ್, ನಾರಾಯಣ ಕರ್ಕೇರಾ, ದಿನೇಶ್ ಏರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ದೇವಳದ ಪ್ರಧಾನ ಕಾರ್ಯನಿರ್ವಾಹಕ ಸತೀಶ್ ಅಮೀನ್ ಮಟ್ಟು, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…