ಉದ್ಯಾವರ : ಯುವಕ ನೇಣುಬಿಗಿದು ಆತ್ಮಹತ್ಯೆ – vishwanews24
ಕಾಪು: ಉದ್ಯಾವರ ಬೊಳ್ಜೆ ನಿವಾಸಿ ನೇಣುಬಿಗಿದು ಆತ್ಮಹತ್ಯೆ
ಕಾಪು: ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿವಾರ ಬೆಳಗಿನ ಜಾವ ನಡೆದಿದೆ.
ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಅಲ್ಲದೆ ಪೆರಂಪಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಇವರು ಭಾಗವಹಿಸಿದ್ದರು.
ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರು ಅರೆಸ್ಟ್ – vishwanews24
