Featured

ಕಾಪು : ಎಂಡಿಎಂಎ ಮಾದಕ ವಸ್ತು ಸಾಗಾಟ ; ಇಬ್ಬರ ಬಂಧನ – vishwanews24

ಕಾಪು :  ಎಂಡಿಎಂಎ ಮಾದಕ ವಸ್ತು ಸಾಗಾಟ ; ಇಬ್ಬರ ಬಂಧನ

ಕಾಪು : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ. ಬೆಳಪು ಗ್ರಾಮದ ದರ್ಗಾ ಬಳಿಯ ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಬಂಧಿತ ಆರೋಪಿಗಳು. ಇವರಿಂದ 2.83 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇವರು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಮಾದಕ ವಸ್ತು ಸಾಗಿಸುತ್ತಿರುವುದು ಕಂಡುಬಂತು. ಅದರಂತೆ ಕಾರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ಇದನ್ನೂ ಓದಿ: 

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ್ ನಿರ್ದೇಶನದಂತೆ, ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ ಅಝಮತ್ ಆಲಿ ಮಾರ್ಗದರ್ಶನದಲ್ಲಿ ಶಿರ್ವ ಪೊಲೀಸ್ ಠಾಣಾ ಎಸ್ಸೈಗಳಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಹಾಗೂ ಠಾಣಾ ಸಿಬ್ಬಂದಿ ಹಾಗೂ ಅಪರಾಧ ಪರಿಶೀಲನಾಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago