ಕಾಪು :ಉಡುಪಿ ಜಿಲ್ಲೆ ಕಾಪು ತಾಲೂಕಿನ ಎಲ್ಲೂರಿನ ಮಹತೋಭಾರ ವಿಶ್ವೇಶ್ವರ ದೇಗುಲದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದದ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ತಗಾದೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿನ ತೀರ್ಮಾನದಂತೆ ಆಚರಣೆ ಸ್ಥಗಿತಗೊಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯಿಂದ ಈ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗುರುವಾರ ನಿಯಮ 72ರ ಅಡಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್, ವಿಶ್ವೇಶ್ವರ ದೇವಸ್ಥಾನದಲ್ಲಿ ಪುರಾತನ ಕಾಲದಿಂದಲೂ ಸಂಪ್ರದಾಯಗಳು ನಡೆದುಕೊಂಡು ಬಂದಿವೆ. ಆದರೆ, ಕಳೆದೆರಡು ವರ್ಷಗಳಿಂದ ಪ್ರಸ್ತುತ ವ್ಯವಸ್ಥಾಪನ ಸಮಿತಿಯು ಆಚರಣೆಗಳನ್ನು ಕೈಬಿಟ್ಟಿದೆ ಎಂದು ಗಮನ ಸೆಳೆದರು.
ಹಸ್ತಕ್ಷೇಪ ಮಾಡಿಲ್ಲ
ಇದಕ್ಕೆ ಪ್ರತಿಕ್ರಿಯಿಸಿದ ಸಭಾ ನಾಯಕರು, ಉದ್ದೇಶಿತ ದೇವಸ್ಥಾನದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದ ವಿಚಾರದಲ್ಲಿ ಎರಡು ಸಮುದಾಯಗಳಲ್ಲಿ ತಗಾದೆ ಇತ್ತು. ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಗ ಸೂಕ್ತ ತೀರ್ಮಾನ ಆಗುವವರೆಗೂ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ತೀರ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿಯು ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇನೇ ಇರಲಿ, ಈ ವಿಚಾರದಲ್ಲಿ ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಂಡು ಆಚರಣೆಗಳನ್ನು ಮುನ್ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…