Featured

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ

ಕಾಪು  :ಉಡುಪಿ ಜಿಲ್ಲೆ ಕಾಪು ತಾಲೂಕಿನ ಎಲ್ಲೂರಿನ ಮಹತೋಭಾರ ವಿಶ್ವೇಶ್ವರ ದೇಗುಲದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದದ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ತಗಾದೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿನ ತೀರ್ಮಾನದಂತೆ ಆಚರಣೆ ಸ್ಥಗಿತಗೊಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯಿಂದ ಈ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಗುರುವಾರ ನಿಯಮ 72ರ ಅಡಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌, ವಿಶ್ವೇಶ್ವರ ದೇವಸ್ಥಾನದಲ್ಲಿ ಪುರಾತನ ಕಾಲದಿಂದಲೂ ಸಂಪ್ರದಾಯಗಳು ನಡೆದುಕೊಂಡು ಬಂದಿವೆ. ಆದರೆ, ಕಳೆದೆರಡು ವರ್ಷಗಳಿಂದ ಪ್ರಸ್ತುತ ವ್ಯವಸ್ಥಾಪನ ಸಮಿತಿಯು ಆಚರಣೆಗಳನ್ನು ಕೈಬಿಟ್ಟಿದೆ ಎಂದು ಗಮನ ಸೆಳೆದರು.

ಹಸ್ತಕ್ಷೇಪ ಮಾಡಿಲ್ಲ
ಇದಕ್ಕೆ ಪ್ರತಿಕ್ರಿಯಿಸಿದ ಸಭಾ ನಾಯಕರು, ಉದ್ದೇಶಿತ ದೇವಸ್ಥಾನದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದ ವಿಚಾರದಲ್ಲಿ ಎರಡು ಸಮುದಾಯಗಳಲ್ಲಿ ತಗಾದೆ ಇತ್ತು. ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಗ ಸೂಕ್ತ ತೀರ್ಮಾನ ಆಗುವವರೆಗೂ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ತೀರ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿಯು ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇನೇ ಇರಲಿ, ಈ ವಿಚಾರದಲ್ಲಿ ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಂಡು ಆಚರಣೆಗಳನ್ನು ಮುನ್ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

13 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

13 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

13 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

13 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

14 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

15 hours ago