ಕಾಪು: ಕಾಪು ತಾಲೂಕಿನ ಎಲ್ಲೂರು ಶ್ರೀ ಮಹಾತೋಭಾರ ವಿಶ್ವೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರದ ಸಂದರ್ಭದಲ್ಲಿ ಪತ್ತೆಯಾಗಿರುವ ಶಾಸನವು ಕ್ರಿ.ಶ 1509 ರ ಕೃಷ್ಣದೇವರಾಯನ ಶಾಸನವಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯ ಪಟ್ಟಿದ್ದಾರೆ.
ಈ ಶಾಸನವನ್ನು ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕ ಪ್ರೊ. ಎಸ್. ಎ. ಕೃಷ್ಣಯ್ಯ ಇವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿರುತ್ತಾರೆ.
ಕಣ ಶಿಲೆ (ಗ್ರಾನೈಟ್) ಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದಲ್ಲಿ 12 ಸಾಲುಗಳಿದ್ದು 2 ಅಡಿ ಎತ್ತರ ಮತ್ತು ಅಗಲವನ್ನು ಹೊಂದಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ-ಚಂದ್ರ ನಂತರದಲ್ಲಿ ನಂದಿ, ನಂದಾದೀಪಗಳು, ಶಿವಲಿಂಗ, ರಾಜಕತ್ತಿ ಹಾಗೂ ಪುಷ್ಪದ ಕೆತ್ತನೆಯಿದೆ.
ಶಾಸನದಲ್ಲಿ ಶಾಲಿವಾಹನ ಶಕವರುಷ 1434 ನಂದನದ ವರ್ತಮಾನ ಸಂವತ್ಸರದ ಜೇಷ್ಠ ಬ 2 ಮಂಗಳವಾರ ಎಂದು ಉಲ್ಲೇಖವಿದೆ. ಈ ಶಾಸನವನ್ನು ಕೃಷ್ಣರಾಯರ ನಿರೂಪದಿಂದ ಮಂಗಲೂರು ಬಾರಕೂರ ರತ್ನಪ್ಪ ಒಡೆಯ ಆಳುವನ ತಿರುಮಲರಾಯ ಚೌಟರು ಮತ್ತು ತಿರುಮಲರಸರಾದ ಕಿಂನಿಕ ಹೆಗಡೆಯವರು ದೇವರಾಡಿಯ ಕುಂದ ಹೆಗ್ಗಡೆಗೆ ಎಲ್ಲೂರ ಶ್ರೀ ವಿಶ್ವನಾಥ ದೇವರ ಸನ್ನಿಧಿಯಲ್ಲಿ ಬರೆಸಿಕೊಟ್ಟದ್ದಾಗಿದೆ. ಶಾಸನದಲ್ಲಿ ತಿಮ್ಮಯ್ಯ ದಂಡನಾಯಕ ಹಾಗೂ ಪುತ್ತಿಗೆ, ಐಕಳ ಮತ್ತು ಎಲ್ಲೂರು ಪ್ರದೇಶಗಳ ಉಲ್ಲೇಖವಿದೆ.
ಕ್ಷೇತ್ರಕಾರ್ಯ ಶೋಧನೆಯಲ್ಲಿ ಕೆ.ಎಲ್. ಕುಂಡಂತಾಯ, ರವಿ ಆಳ್ವ ಬಿಳಿಯಾರು, ಗೌತಮ್ ಕಾಮತ್ ಮೂಡುಬೆಳ್ಳೆ ಅವರು ಸಹಕರಿಸಿರುತ್ತಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…