ಕಾಪು: ವಿದ್ವಾನ್ ಕೆ.ಜಿ ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ಕಲ್ಯಾ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಏಪ್ರಿಲ್ 17 ಗುರುವಾರ ಮತ್ತು 18 ಶುಕ್ರವಾರ ಕಾಪು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ನಡೆಯಲಿದೆ.
ಏಪ್ರಿಲ್ 17ರ ಬೆಳಿಗ್ಗೆ 9ಕ್ಕೆ ಪ್ರಾರ್ಥನೆ, ಪುಣ್ಯಾಹ, ನಾಂದಿ ಸಮಾರಾಧನೆ, ಮಾತೃಕಾ ಪೂಜೆ, ಗಣಯಾಗ, ನವಗ್ರಹ ಯಾಗ, ಸಂಜೆ 5 ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಯಂಕಾಲ 6 ರಿಂದ ಸಪ್ತಶತಿ ಪಾರಾಯಣ, ದುರ್ಗಾ ನಮಸ್ಕಾರ ಪೂಜೆ, ಅಷ್ಟಾವಧಾನ. ರಾತ್ರಿ 6.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ. ರಾತ್ರಿ 7.30 ಹಾಸ್ಯಮಯ ತುಳು ನಾಟಕ ‘ಅಮ್ಮು.. ಅಮುಂಡರಾ…?’
ಏಪ್ರಿಲ್ 18ರ ಬೆಳಿಗ್ಗೆ 7.30ರಿಂದ ಚತುಃಷಷ್ಠಿ, ಯೋಗಿನೀ ಮಂಡಲ ಪೂಜಾ, ಚತು:ಷಷ್ಠಿ ಯೋಗಿನೀ ಬಲಿ, ಚತುಃಷಷ್ಠಿ ಯೋಗಿನಿ ದೇವತಾ ಪಾಯಸಯಾಗ. ಪೂರ್ವಾಹ್ನ ಗಂಟೆ 11ಕ್ಕೆ ಪೂರ್ಣಾಹುತಿ, ಪಂಚವಿಂಶತಿ ಕಲಶ ಆರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜಾ ಪೂರ್ವಾಹ್ನ ಗಂಟೆ 11.30 ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಉಚ್ಚಂಗಿ ಸಹಿತ ಕಾಪು ಶ್ರೀ ಮಾರಿಯಮ್ಮ ದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಳದ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…