ಕಾಪು : ಐದು ದಶಕ ಒಟ್ಟಿಗೇ ಜೀವಿಸಿದ್ದ ದಂಪತಿಯೊಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು ಒಟ್ಟಿಗೇ ನಡೆದಿದೆ.
ಕಾಪು ತಾಲೂಕಿನ ಬೆಳಪು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಅಲಿಯಾಸ್ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ರೇವತಿ ಶೆಟ್ಟಿ (75) ಅವರು ದಿನದ ಅಂತರದಲ್ಲಿ ಮೃತಪಟ್ಟ ದಂಪತಿ. ಕೃಷ್ಣ ಅವರು ವಯಸ್ಸಿನ ಕಾರಣದಿಂದ ಆಗಸ್ಟ್ 2ರ ಬೆಳಗ್ಗೆ ಮೃತಪಟ್ಟಿದ್ದಾರೆ. ರೇವತಿ ಅವರು ಆಗಸ್ಟ್ 3ರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ದಂಪತಿಯ ಮಕ್ಕಳು ಮುಂಬೈ ಮತ್ತು ಇತರ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಹೀಗಾಗಿ ಮಕ್ಕಳು ಬರುವವರೆಗೆ ಅಂತಿಮ ವಿಧಿಗಳನ್ನು ನೆರವೇರಿಸಲು ಕಾಯಲಾಗುತ್ತಿತ್ತು. ಆದರೆ ಅದಕ್ಕೂ ಮುನ್ನ ಮರುದಿನ ಬೆಳಗ್ಗೆ ಅವರ ಪತ್ನಿಯೂ ಸಾವನ್ನಪ್ಪಿದ್ದರು. ಹೀಗಾಗಿ ಇಬ್ಬರ ಅಂತಿಮ ವಿಧಿವಿಧಾನಗಳನ್ನು ಮಕ್ಕಳು, ಕುಟುಂಬದವರು ಸೇರಿ ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿ ನೇತೃತ್ವದಲ್ಲಿ ನೆರವೇರಿಸಲಾಯಿತು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…