ಕಾಪು : ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂ. ಪುಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಪು : ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂ. ಪುಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವು ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪುಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಿಳಿಸಿದ್ದಾರೆ.
ಕೇಂದ್ರ ಸರಕಾರಕ್ಕೆ ಸಿಅರ್ ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪುಸ್ತಾವನೆ ಸಲ್ಲಿಸಲಾಗಿದೆ.ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ ದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪುಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪುಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.
ಕೇರಳ: ಯೂಟ್ಯೂಬರ್ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – vishwanews24
