ಕಾಪು: ಕರಾವಳಿ ಜಿಲ್ಲೆಗಳಲ್ಲಿ ಪಡಿತರದ ಜತೆಗೆ ಕುಚ್ಚಲಕ್ಕಿ ನೀಡಲು ಸರಕಾರ ಬದ್ಧವಿದೆ. ಕರಾವಳಿ ಜಿಲ್ಲೆಯ ಜೀವನಾಡಿಯಾಗಿರುವ ಕುಚ್ಚಲಕ್ಕಿ ಪೂರೈಕೆ ವಿಚಾರವನ್ನು ಯಾರೂ ಹಾಸ್ಯಾಸ್ಪದ ವಿಷಯವನ್ನಾಗಿಸುವ ಅಗತ್ಯವಿಲ್ಲ. ಕುಚ್ಚಲಕ್ಕಿ ವಿತರಿಸುವ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ.
ಮುಂದಿನ ದಿನಗಳಲ್ಲಿ ತೊಡಕು ನಿವಾರಿಸಿ ವಿತರಣೆಗೆ ಸರಕಾರ ಬದ್ಧವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಕುಚ್ಚಲಕ್ಕಿಗೆ ಪೂರಕವಾದ ಭತ್ತದ ತಳಿಗಳಾದ ಎಂಒ4, ಅಭಿಲಾಷಾ, ಜ್ಯೋತಿ, 1001 ಕೇಂದ್ರದ ಬೆಂಬಲ ಬೆಲೆ ವ್ಯಾಪ್ತಿಗೆ ಬಂದಿರಲಿಲ್ಲ. ಈ ತಳಿಗಳ ಪಟ್ಟಿ ಮಾಡಿ ಕೇಂದ್ರ ಸರಕಾರದಿಂದ ಅನುಮೋದನೆ ಪಡೆದು ಹೆಚ್ಚುವರಿಯಾಗಿ 500 ರೂ. ಸಬ್ಸಿಡಿ ನೀಡಿ ಭತ್ತ ಖರೀದಿಗೆ ಮುಂದಾಗಿದ್ದೇವೆ. ಕರಾವಳಿಯ ಮೂರು ಜಿಲ್ಲೆಗಳಲ್ಲೂ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ನಿರೀಕ್ಷೆ ಮಾಡಿದ ಪ್ರಮಾಣದಲ್ಲಿ ಭತ್ತ ಖರೀದಿಗೆ ಬಂದಿರಲಿಲ್ಲ. ಮುಂದೆ ಇದನ್ನು ಸರಿದೂಗಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು.
ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…