ಕಾಪು : ಕಾರು ಡಿಕ್ಕಿ : ಸ್ಕೂಟರ್‌ ಸವಾರ ಸ್ಥಳದಲ್ಲೇ ಸಾವು -Vishwanews24

Featured, ಉಡುಪಿ

ಕಾಪು : ಕಾರೊಂದು ಡಿವೈಡರ್‌ಗೆ ಗುದ್ದಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಪಾಂಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಗೆ ನಡೆದಿದೆ.

ಮೃತರನ್ನು ಸುಧಾಕರ್‌ (50) ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಏರಿ ಇನ್ನೊಂದು ಬದಿಯ ರಸ್ತೆಗೆ ಪಲ್ಟಿಯಾಗಿದ್ದು ಇದೇ ಸಂದರ್ಭದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಕಾರು ಬಳಿಕ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಕಾಪು ಪೊಲೀಸ್‌ ಠಾಣೆಯ ಪೊಲೀಸರು ಆಗಮಿಸಿದ್ದಾರೆ.