ಕಾಪು : ಕಾರೊಂದು ಡಿವೈಡರ್‌ಗೆ ಗುದ್ದಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಪಾಂಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಿಗ್ಗೆ ಸುಮಾರು 10 ಗಂಟೆಗೆ ನಡೆದಿದೆ.
ಮೃತರನ್ನು ಸುಧಾಕರ್ (50) ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿ ಇನ್ನೊಂದು ಬದಿಯ ರಸ್ತೆಗೆ ಪಲ್ಟಿಯಾಗಿದ್ದು ಇದೇ ಸಂದರ್ಭದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಕಾರು ಬಳಿಕ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಕಾಪು ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದಾರೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…