ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಂಗಾಳ ಕಟ್ಟಿಕೆರೆ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಮಾಹಿತಿ ದೊರೆತ ತಕ್ಷಣ ಕಾಪು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಘಟನೆ ಪರಿಶೀಲಿಸಿದ್ದಾರೆ. ಅಪಘಾತದ ನಿಖರ ಕಾರಣಗಳ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…