ಕಾಪು : ಕೆವೈಸಿ ಅಪ್‍ಡೇಟ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 6.19 ಲ.ರೂ. ನಗದು ಅಕ್ರಮವಾಗಿ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಏ.24 ರಂದು ಸೀತಮ್ಮ ಎಂಬವರು ತಮ್ಮ ಮನೆಯಲ್ಲಿ ಇದ್ದ ವೇಳೆ ತಮ್ಮ ಹಾಗೂ ತಮ್ಮ ಪತಿಯ ಮೊಬೈಲ್ ನಂಬರಿಗೆ ಬ್ಯಾಂಕ್ ಎಕೌಂಟ್ ಹೋಲ್ಡ್ ಆಗಿದ್ದು ಕೆವೈಸಿ ಅಪ್‍ಡೇಟ್ ಮಾಡುವ ಬಗ್ಗೆ ಕರೆ ಮಾಡುವಂತೆ ನಂಬರ್ ನ್ನು ಸೂಚಿಸಲಾಯಿತು. ಇದನ್ನು ನಂಬಿದ ಸೀತಮ್ಮ ಅವರು ಮೆಸೇಜ್‍ನಲ್ಲಿ ಸೂಚಿಸಿದಂತೆ ಆ ನಂಬರಿಗೆ ಕರೆ ಮಾಡಿದಾಗ ಆರೋಪಿಗಳು ಸೂಚಿಸಿದಂತೆ ಓಟಿಪಿಗಳನ್ನು ನೀಡಿರುತ್ತಾರೆ. ಬಳಿಕ ಅನುಮಾನಗೊಂಡು ಮೆಸೇಜ್‍ಗಳನ್ನು ಪರಿಶೀಲಿಸಿದಾಗ ತಮ್ಮ ಬ್ಯಾಂಕ್ ಖಾತೆಯಿಂದ 6,19,000 ರೂ. ಕಟಾವು ಆಗಿರುವುದು ತಿಳಿದು ಬಂದಿದ್ದು ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…