ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫಲ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫಲ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆಗಳು ವಿಫಲವಾಗುತ್ತಿವೆ. ಅಧಿಕಾರಿಗಳು ಕಾರ್ಯಕ್ರಮಗಳ ಬಗ್ಗೆ ಪ್ರಚಾರಗೊಳಿಸಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಕಾಪು ಪುರಸಭಾ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರೀ ಮಳೆಯಿಂದಾಗಿ ಕಾಪು ತಾಲೂಕಿನಲ್ಲಿ ಸುಮಾರು 20 ಹೆಕ್ಟೇರ್ ಬೆಳೆ ಹಾನಿಯಾಗಿದ್ದು 11 ಗ್ರಾಮಗಳ 54 ಜನ ರೈತರ ಬೆಳೆ ನಷ್ಟವಾಗಿದೆ.
ಉಡುಪಿ : ಗಣೇಶ ಚತುರ್ಥಿ- ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ – vishwanews24
ಕೃಷಿ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಸರ್ವೆ ನಡೆಸಿ ವರದಿ ನೀಡುವ ಅಗತ್ಯವಿದೆ. ಕಾಪು ತಾಲೂಕು ಆಸ್ಪತ್ರೆ ನಿರ್ಮಾಣದ ಬಗ್ಗೆ ಅಗತ್ಯ ನಿವೇಶನ ಗುರುತಿಸುವಂತೆ ಮತ್ತು ಡೆಂಗ್ಯೂ ಹರಡದ ಹಾಗೆ ತಡೆಗಟ್ಟುವಿಕೆಯ ಬಗ್ಗೆ ಅಗತ್ಯ ಕ್ರಮ ವಹಿಸುವುದು, ಕೊರಗ ಸಮುದಾಯದ ಶೈಕ್ಷಣಿಕ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಇಲಾಖೆಗಳಿಗೆ ಸೂಚನೆ ನೀಡಿದರು.
ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್., ತಾ.ಪಂ. ಆಡಳಿತಾಧಿಕಾರಿ ಪೂರ್ಣಿಮಾ, ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್ ಡಿ’ಸಿಲ್ವ, ಕೆಡಿಪಿ ನಾಮ ನಿರ್ದೇಶಿತ ಸದಸ್ಯರಾದ ವೈ. ಸುಕುಮಾರ್, ಜಿತೇಂದ್ರ ಪುರ್ಟಾಡೋ, ಪ್ರಭಾ ಶೆಟ್ಟಿ, ರಾಜೇಶ್ ಕುಲಾಲ್, ರಮೇಶ್ ಬೆಳ್ಳೆ ಉಪಸ್ಥಿತರಿದ್ದರು.
ಕುಂದಾಪುರ : ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ – vishwanews24
