Featured

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು  ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫ‌ಲ: ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ – vishwanews24

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು  ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫ‌ಲ: ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆಗಳು ವಿಫಲವಾಗುತ್ತಿವೆ. ಅಧಿಕಾರಿಗಳು ಕಾರ್ಯಕ್ರಮಗಳ ಬಗ್ಗೆ ಪ್ರಚಾರಗೊಳಿಸಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದರು.

ಕಾಪು ಪುರಸಭಾ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರೀ ಮಳೆಯಿಂದಾಗಿ ಕಾಪು ತಾಲೂಕಿನಲ್ಲಿ ಸುಮಾರು 20 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು 11 ಗ್ರಾಮಗಳ 54 ಜನ ರೈತರ ಬೆಳೆ ನಷ್ಟವಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಸರ್ವೆ ನಡೆಸಿ ವರದಿ ನೀಡುವ ಅಗತ್ಯವಿದೆ. ಕಾಪು ತಾಲೂಕು ಆಸ್ಪತ್ರೆ ನಿರ್ಮಾಣದ ಬಗ್ಗೆ ಅಗತ್ಯ ನಿವೇಶನ ಗುರುತಿಸುವಂತೆ ಮತ್ತು ಡೆಂಗ್ಯೂ ಹರಡದ ಹಾಗೆ ತಡೆಗಟ್ಟುವಿಕೆಯ ಬಗ್ಗೆ ಅಗತ್ಯ ಕ್ರಮ ವಹಿಸುವುದು, ಕೊರಗ ಸಮುದಾಯದ ಶೈಕ್ಷಣಿಕ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಇಲಾಖೆಗಳಿಗೆ ಸೂಚನೆ ನೀಡಿದರು.

ಕಾಪು ತಹಶೀಲ್ದಾರ್‌ ಡಾ| ಪ್ರತಿಭಾ ಆರ್‌., ತಾ.ಪಂ. ಆಡಳಿತಾಧಿಕಾರಿ ಪೂರ್ಣಿಮಾ, ಕಾರ್ಯ ನಿರ್ವಹಣಾಧಿಕಾರಿ ಜೇಮ್ಸ್‌ ಡಿ’ಸಿಲ್ವ, ಕೆಡಿಪಿ ನಾಮ ನಿರ್ದೇಶಿತ ಸದಸ್ಯರಾದ ವೈ. ಸುಕುಮಾರ್‌, ಜಿತೇಂದ್ರ ಪುರ್ಟಾಡೋ, ಪ್ರಭಾ ಶೆಟ್ಟಿ, ರಾಜೇಶ್‌ ಕುಲಾಲ್‌, ರಮೇಶ್‌ ಬೆಳ್ಳೆ ಉಪಸ್ಥಿತರಿದ್ದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

8 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

8 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

8 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

12 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

13 hours ago