ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿ, ಕೃಷಿ, ರೈತ, ಬೀಡಿ ಕಾರ್ಮಿಕರ ಸಹಿತವಾದ ವಿವಿಧ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಇದರ ನೇತೃತ್ವದಲ್ಲಿ ಕಾಪು ಪೇಟೆಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದ ಬೆನ್ನೆಲುಬಾದ ರೈತರಿಗೆ, ಕಾರ್ಮಿಕರಿಗೆ ಕಂಟಕ ಪ್ರಾಯವಾದ ನೂತನ ಕಾಯ್ದೆಗಳನ್ನು ಜಾರಿಗೆ ತಂದು ರೈತರ, ಕಾರ್ಮಿಕರ ಬದುಕನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ದುಸ್ತರಗೊಳಿಸಿವೆ ಎಂದರು.
ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಬಳಿಯಿಂದ ಕಾಪು ಪೇಟೆಯವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಬಳಿಕ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು. ಬಳಿಕ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ತಹಶೀಲ್ದಾರ್ ಅವರಿಗೆ ಮನವಿ ನೀಡಲಾಯಿತು.
ಸಿಐಟಿಯು ರಾಜ್ಯ ಪ್ರತಿನಿಧಿ ಕವಿರಾಜ್, ಸಿಐಟಿಯು ಜಿಲ್ಲಾಧ್ಯಕ್ಷ ಮಹಾಬಲ ವಡೇರ ಹೋಬಳಿ, ಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣ ರೈ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಶೆಟ್ಟಿ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಶಿವಾಜಿ ಸುವರ್ಣ, ಪುರಸಭೆ ಉಪಾಧ್ಯಕ್ಷೆ ಮಾಲಿನಿ, ಹರೀಶ್ ಶೆಟ್ಟಿ ಪಾಂಗಾಳ, ಜಿ.ಪಂ. ಮಾಜಿ ಅಧ್ಯಕ್ಷೆ ಸರಸು ಡಿ. ಬಂಗೇರ, ಕಾಂಗ್ರೆಸ್ ಮುಖಂಡರಾದ ನವೀನ್ ಎನ್. ಶೆಟ್ಟಿ, ವೈ. ಸುಕುಮಾರ್, ಸುಧೀರ್ ಕುಮಾರ್, ರಮೀಜ್ ಹುಸೈನ್, ಅಮೀರ್ ಮಹಮ್ಮದ್, ಪ್ರಭಾ ಬಿ. ಶೆಟ್ಟಿ, ದೀಪಕ್ ಕುಮಾರ್ ಎರ್ಮಾಳ್, ಸೌರಭ್ ಬಲ್ಲಾಳ್, ಕೀರ್ತಿ ಶೆಟ್ಟಿ, ಹರೀಶ್ ನಾಯಕ್, ಅಖಿಲೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…