Featured

ಕಾಪು : ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ -Vishwanews24

ಕಾಪು : ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ -Vishwanews24

ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿ, ಕೃಷಿ, ರೈತ, ಬೀಡಿ ಕಾರ್ಮಿಕರ ಸಹಿತವಾದ ವಿವಿಧ ಜನ ವಿರೋಧಿ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಇದರ ನೇತೃತ್ವದಲ್ಲಿ ಕಾಪು ಪೇಟೆಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಭೆ ನಡೆಯಿತು.‌

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ದೇಶದ ಬೆನ್ನೆಲುಬಾದ ರೈತರಿಗೆ, ಕಾರ್ಮಿಕರಿಗೆ ಕಂಟಕ ಪ್ರಾಯವಾದ ನೂತನ ಕಾಯ್ದೆಗಳನ್ನು ಜಾರಿಗೆ ತಂದು ರೈತರ, ಕಾರ್ಮಿಕರ ಬದುಕನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ದುಸ್ತರಗೊಳಿಸಿವೆ ಎಂದರು.

ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಬಳಿಯಿಂದ ಕಾಪು ಪೇಟೆಯವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಬಳಿಕ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು. ಬಳಿಕ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ತಹಶೀಲ್ದಾರ್ ಅವರಿಗೆ ಮನವಿ ನೀಡಲಾಯಿತು.

ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ :ವಿನಯ್ ಕುಮಾರ್ ಸೊರಕೆ -Vishwanews24

ಸಿಐಟಿಯು ರಾಜ್ಯ ಪ್ರತಿನಿಧಿ ಕವಿರಾಜ್, ಸಿಐಟಿಯು ಜಿಲ್ಲಾಧ್ಯಕ್ಷ ಮಹಾಬಲ ವಡೇರ ಹೋಬಳಿ, ಬೀಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣ ರೈ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಶೆಟ್ಟಿ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ಶಿವಾಜಿ ಸುವರ್ಣ, ಪುರಸಭೆ ಉಪಾಧ್ಯಕ್ಷೆ ಮಾಲಿನಿ, ಹರೀಶ್ ಶೆಟ್ಟಿ ಪಾಂಗಾಳ, ಜಿ.ಪಂ.‌ ಮಾಜಿ ಅಧ್ಯಕ್ಷೆ ಸರಸು ಡಿ.‌ ಬಂಗೇರ, ಕಾಂಗ್ರೆಸ್ ಮುಖಂಡರಾದ ನವೀನ್‌ ಎನ್. ಶೆಟ್ಟಿ, ವೈ. ಸುಕುಮಾರ್, ಸುಧೀರ್ ಕುಮಾರ್, ರಮೀಜ್ ಹುಸೈನ್, ಅಮೀರ್‌ ಮಹಮ್ಮದ್, ಪ್ರಭಾ ಬಿ. ಶೆಟ್ಟಿ, ದೀಪಕ್ ಕುಮಾರ್ ಎರ್ಮಾಳ್, ಸೌರಭ್ ಬಲ್ಲಾಳ್, ಕೀರ್ತಿ ಶೆಟ್ಟಿ, ಹರೀಶ್ ನಾಯಕ್, ಅಖಿಲೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

9 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

12 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

12 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

14 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

15 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

18 hours ago