ಕಾಪು: ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಉತ್ಪನ್ನಗಳ ಗುಣಮಟ್ಟ ಮತ್ತು ಮಿತ ದರದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ದಲ್ಲಿದೆ ಎಂದು ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ್ ಹೆಗ್ಡೆ ಹೇಳಿದರು.
ಉಳಿಯಾರಗೋಳಿಯಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಸಮೃದ್ಧಿ ಯೋಜನೆಯಡಿಯಲ್ಲಿ ಆರಂಭಗೊಂಡ ನಂದಿನಿ ಕ್ಷೀರ ಮಳಿಗೆ ಉದ್ಘಾಟಿಸಿ ಮಾತನಾಡಿದರು.
ಕೇವಲ 6 ಸಾವಿರ ಲೀ. ಹಾಲಿನೊಂದಿಗೆ ಗ್ರಾಮ ಆರಂಭಗೊಂಡಿರುವ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಇಂದು 5 ಲಕ್ಷ ಲೀಟರಿಗೂ ಹೆಚ್ಚು ಹಾಲು ಸಂಗ್ರಹಿಸುತ್ತಿದೆ ಎಂದು ಹೇಳಿದರು.
ಸಾಯಿರಾಧ ಗ್ರೂಪ್‌ನ ಆಡಳಿತ
ನಿರ್ದೇಶಕ ಮನೋಹರ್ ಎಸ್.ಶೆಟ್ಟಿ, ಕರ್ನಾಟಕ ರಾಜ್ಯ ಹಾಲು ಮಹಾ ಮಂಡಲದ ನಿರ್ದೇಶಕ ಕಾಪು ದಿವಾಕರ್
ಶೆಟ್ಟಿ ಶುಭ ಹಾರೈಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶೈಲಜಾ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಕಾಪು ಪುರಸಭೆಯ ಮಾಜಿ ಅಧ್ಯಕ್ಷೆ ಸೌಮ್ಯಾ
ಸಂಜೀವ, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸ್ಮಿತಾ ಶೆಟ್ಟಿ, ದ.ಕ. ಜಿಲ್ಲಾ ಹಾಲು ಉತ್ಪಾದಕರ
ಒಕ್ಕೂಟದ ಡೆಪ್ಯುಟಿ ಮ್ಯಾನೇಜರ್ ರವಿರಾಜ್ ಉಡುಪ ಉಪಸ್ಥಿತರಿದ್ದರು.
ಕ್ಷೀರ ಮಳಿಗೆಯ ಪಾಲುದಾರ ಮನೋಹರ್ ಕಾಪು ಸ್ವಾಗತಿಸಿ ವಂದಿ ಸಿದರು. ಆರ್‌ಜೆ ಪ್ರಸನ್ನ ನಿರೂಪಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…