ಕಾಪು: ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ದಸ್ತಗಿರಿ ವಾರಂಟ್ ಜಾರಿಯಾಗಿದ್ದ ಆರೋಪಿಯ ಮನೆಗೆ ಕೋರ್ಟ್ ವಾರಂಟ್ ತಂದವರ ಮೇಲೆ ಕಾರು ಚಲಾಯಿಸಿ ಆರೋಪಿತ ಪರಾರಿಯಾದ ಘಟನೆ ಮಾ. 5ರಂದು ಕಟಪಾಡಿ ಅಚ್ಚಡದಲ್ಲಿ ನಡೆದಿದೆ.
ಕಟಪಾಡಿ ಅಚ್ಚಡ ನಿವಾಸಿ ಸಾದಿಕ್ ವಾರಂಟ್ ತಂದವರ ಮೇಲೆ ಕಾರು ಚಲಾಯಿಸಿ ಪರಾರಿಯಾದಾತ.
ಉಡುಪಿ ಕೋರ್ಟ್‌ನ ಆದೇಶದಂತೆ ಆರೋಪಿ ಸಾದಿಕ್‌ನನ್ನು ಮಾ. 7ರೊಳಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿಯ ಕೌಟುಂಬಿಕ ನ್ಯಾಯಾಲಯದ ಬೈಲಿಫ್, ಪ್ರಸ್ತುತ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಸಂಪತ್ ಮತ್ತಿತರರು ಆರೋಪಿಯ ಮನೆಗೆ ತೆರಳಿದ್ದರು.
ಆರೋಪಿಗೆ ದಸ್ತಗಿರಿ ವಾರೆಂಟ್‌ನ ವಿಷಯವನ್ನು ತಿಳಿಸಿ ತಮ್ಮೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದಾಗ, ಆತ ನ್ಯಾಯಾಲಯಕ್ಕೆ ಹಾಜರಾಗಲು ಒಪ್ಪದೆ ತನ್ನ ಕಾರಲ್ಲಿ ಕುಳಿತು ಎದುರಿನಲ್ಲಿದ್ದ ಮೂವರ ಮೈಮೇಲೆ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…