Featured

ಕಾಪು ಕ್ಷೇತ್ರದಲ್ಲಿ ನೀರಿನ‌ ಸಮಸ್ಯೆ ಇರಬಾರದು ಅನ್ನೋ‌ ಮಹದಾಸೆ ನನ್ನದು : ವಿನಯ್ ಕುಮಾರ್ ಸೊರಕೆ – Vishwanews24

ದೇವಸ್ಥಾನದ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸೊರಕೆ ಆಕ್ರೋಶ

ಕಾಪು: ದೇವರು ಧರ್ಮ ಅಂತಾ ಮಾತಾಡೋ ಬಿಜೆಪಿ ನಾಯಕರು ಇಂದು ದೇವಸ್ಥಾನದ ವಿಷಯದಲ್ಲಿ ಹೀನಾಯ ರಾಜಕೀಯ ಮಾಡೋಕೆ ಶುರು ಮಾಡಿದ್ದಾರೆ ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯಡ್ಕ ಪೇಟೆಯಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇವಸ್ಥಾನ ಧರ್ಮ ಅಂತಾ ಯುವಜನತೆಗೆ ಪಾಠ ಹೇಳುವ ಬಿಜೆಪಿ ರಾಜಕೀಯ ನಾಯಕರು ಹಿರಿಯಡ್ಕ ವೀರಭದ್ರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ವಿಚಾರದಲ್ಲಿ ಮತ್ತು ಪೆರ್ಡೂರು ಅನಂತ ಪದ್ಮನಾಭ ದೇವಸ್ಥಾನದ ರಸ್ತೆ ಅಗಲೀಕರಣ ವಿಷಯದಲ್ಲಿ ರಾಜಕೀಯ ಮಾಡಿ ದೇವಸ್ಥಾನದ ವಾಸ್ತುವಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ನನ್ನ ಶಾಸಕತ್ವದ ಅವಧಿಯಲ್ಲಿ ಹಿರಿಯಡ್ಕ ವ್ಯಾಪ್ತಿಯಲ್ಲಿ 800 ಅಕ್ರಮ ಸಕ್ರಮದ ಮನೆ ನಿವೇಶನ ಶಿಫಾರಸು ಅರ್ಜಿಯನ್ನು ತಿರಸ್ಕರಿಸಲಾಗಿದೆ. ಪ್ರತೀ ಪಂಚಾಯತ್ ನಲ್ಲಿ ಬಹಳಷ್ಟು ಅರ್ಜಿಯ ಗಂಟಿದೆ. ಆ ಗಂಟು ಬಿಚ್ಚೋ ಕೆಲಸವನ್ನು ಮಾಡಬೇಕಿದೆ.ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ.

ಹಿರಿಯಡ್ಕದಲ್ಲಿ ನಾಡ ಕಚೇರಿ ಸ್ಥಾಪನೆಯ ಅಗತ್ಯತೆ ಇದೆ. ಕಾಪು ಕ್ಷೇತ್ರದಲ್ಲಿ ನೀರಿನ‌ ಸಮಸ್ಯೆ ಇರಬಾರದು ಅನ್ನೋ‌ ಮಹದಾಸೆ ನನ್ನದು ಹೀಗಾಗಿ ಮಣಿಪುರದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕೆಲಸ ಆರಂಭವಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

 

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

14 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

14 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

15 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

15 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

17 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

17 hours ago