Featured

ಕಾಪು ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು : ಶಾಸಕ ಲಾಲಾಜಿ ಆರ್ ಮೆಂಡನ್ -Vishwanews24

ಕಾಪು : ಕಾಪು ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಇದರ ಸದ್ಬಳಕೆ ಮಾಡಿಕೊಂಡು ಸಮಗ್ರ ಅಭಿವೃದ್ಧಿಯತ್ತ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.

ಬುಧವಾರ ಕಾಪು ಪುರಸಭಾ ಸಭಾಭವನದಲ್ಲಿ ನಡೆದ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾವಿರಾರು ಕೋಟಿಯ ಯೋಜನೆಗಳು ಕಾಪು ಕ್ಷೇತ್ರಗಳಲ್ಲಿ ಇದ್ದರೂ ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಕೈಗಾರಿಕೆಗಳು ಇನ್ನಷ್ಟು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿಕೊಂಡಬೇಕಾಗಿದೆ. ಕಾಪು, ಪಡುಬಿದ್ರಿ, ಬ್ಲೂಫ್ಲಾಗ್ ಬೀಚ್‍ಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸೋಧ್ಯಮಕ್ಕೆ ಹೊಸ ಚೈತನ್ಯ ತುಂಬಲಾಗುವುದು ಎಂದರು.

ಮೆಸ್ಕಾಂಗೆ ಕಚೇರಿಗೆ ಸೂಕ್ತ ನಿವೇಶನ, ಮಿನಿ ವಿಧಾನಸೌಧ ಸಹಿತ ವಿವಿಧ ಕಚೇರಿಗಳಿಗೆ ಕಟ್ಟಡ ನಿರ್ಮಾಣ, ಮಿನಿವಿಧಾನಸೌಧ ನಿರ್ಮಾಣ ಕ್ಕಾಗಿ 10 ಕೋಟಿ ರೂ. ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಎಡಿಸಿ ಸದಾಶಿವ ಪ್ರಭು, ಜಿಲ್ಲಾ ಪಂ. ಅಧ್ಯಕ್ಷ ದಿನಕರ್ ಬಾಬು, ತಾಲ್ಲೂಕು ಪಂ. ಅಧ್ಯಕ್ಷೆ ನೀತಾ ಗುರುರಾಜ್, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಖ್, ಜಿಲ್ಲಾ ಪಂ. ಮುಖ್ಯಯೋಜನಾಧಿಕಾರಿ ಶ್ರೀನಿವಾಸ ರಾವ್, ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಜಿಲ್ಲಾ ಪಂ. ಸದಸ್ಯರು, ತಾಲ್ಲೂಕು ಪಂ. ಸದಸ್ಯರು, ಗ್ರಾಮ ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭಾ ಸದಸ್ಯರು ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago