ಕಾಪು : ಕಾಪು ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಇದರ ಸದ್ಬಳಕೆ ಮಾಡಿಕೊಂಡು ಸಮಗ್ರ ಅಭಿವೃದ್ಧಿಯತ್ತ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಬುಧವಾರ ಕಾಪು ಪುರಸಭಾ ಸಭಾಭವನದಲ್ಲಿ ನಡೆದ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾವಿರಾರು ಕೋಟಿಯ ಯೋಜನೆಗಳು ಕಾಪು ಕ್ಷೇತ್ರಗಳಲ್ಲಿ ಇದ್ದರೂ ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಕೈಗಾರಿಕೆಗಳು ಇನ್ನಷ್ಟು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿಕೊಂಡಬೇಕಾಗಿದೆ. ಕಾಪು, ಪಡುಬಿದ್ರಿ, ಬ್ಲೂಫ್ಲಾಗ್ ಬೀಚ್ಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸೋಧ್ಯಮಕ್ಕೆ ಹೊಸ ಚೈತನ್ಯ ತುಂಬಲಾಗುವುದು ಎಂದರು.
ಮೆಸ್ಕಾಂಗೆ ಕಚೇರಿಗೆ ಸೂಕ್ತ ನಿವೇಶನ, ಮಿನಿ ವಿಧಾನಸೌಧ ಸಹಿತ ವಿವಿಧ ಕಚೇರಿಗಳಿಗೆ ಕಟ್ಟಡ ನಿರ್ಮಾಣ, ಮಿನಿವಿಧಾನಸೌಧ ನಿರ್ಮಾಣ ಕ್ಕಾಗಿ 10 ಕೋಟಿ ರೂ. ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಎಡಿಸಿ ಸದಾಶಿವ ಪ್ರಭು, ಜಿಲ್ಲಾ ಪಂ. ಅಧ್ಯಕ್ಷ ದಿನಕರ್ ಬಾಬು, ತಾಲ್ಲೂಕು ಪಂ. ಅಧ್ಯಕ್ಷೆ ನೀತಾ ಗುರುರಾಜ್, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಖ್, ಜಿಲ್ಲಾ ಪಂ. ಮುಖ್ಯಯೋಜನಾಧಿಕಾರಿ ಶ್ರೀನಿವಾಸ ರಾವ್, ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಜಿಲ್ಲಾ ಪಂ. ಸದಸ್ಯರು, ತಾಲ್ಲೂಕು ಪಂ. ಸದಸ್ಯರು, ಗ್ರಾಮ ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭಾ ಸದಸ್ಯರು ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…