ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ :ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ  – vishwanews24

Featured, ಉಡುಪಿ

ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ :ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ 

ಉಡುಪಿ ಕಂಬಳ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ : ಬಿಜೆಪಿ ಶಾಸಕರು, ಸಂಸದರಿಂದ ಎಚ್ಚರಿಕೆ

ಉಡುಪಿ: ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿ ಪಡಿಸಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪುದರ್ಶಿಸುತ್ತೇವೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುಡುಗಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಪು ಕ್ಷೇತ್ರದಲ್ಲಿ ನಡೆಯುವ ಪ್ರತಿ ಅಭಿವೃದ್ಧಿ ಕೆಲಸಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಅಧಿಕಾರಿಗಳನ್ನು ಬಳಸಿಕೊಂಡು ಸರಕಾರದ ಮೂಲಕ ಒತ್ತಡ ಹಾಕಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.

6 ತಿಂಗಳ ಹಿಂದೆಯೇ ಎಸಿ, ಡಿಸಿ ಸಹಿತ ಸರಕಾರಿ ಅಧಿಕಾರಿಗಳು ಪರಿಶೀಲನೆ ನಡೆಸಿ ಗಡಿ ಗುರುತು ಮಾಡಿ 6.30 ಎಕರೆ ಭೂಮಿಯನ್ನು ಯುವಜನ ಸಬಲೀಕರಣ ಇಲಾಖೆಗೆ ಇದೇ ಸರಕಾರ ಮಂಜೂರು ಮಾಡಿದೆ. ಪಕ್ಷಾತೀತ, ಜಾತ್ಯಾತೀತವಾಗಿ ಕಂಬಳ ಸಮಿತಿ ರಚಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಮಂತ್ರಣ ಪತ್ರಿಕೆಯ ನಕಲು ಕಳುಹಿಸಿ ಅವರಿಂದಲೇ ಒಪ್ಪಿಗೆಯನ್ನು ಪಡೆಯಲಾಗಿದೆ. ಕಾಂಗ್ರೆಸ್ ನ ನಾಯಕರ ಫೋಟೋವನ್ನು ಮುದ್ರಿಸಲಾಗಿದೆ. ಕೊನೆಯ ಕ್ಷಣದಲ್ಲಿ ಸೊರಕೆ ಉಸ್ತುವಾರಿ ಸಚಿವರಿಗೆ ಒತ್ತಡ ಹಾಕಿ ಕಂಬಳವನ್ನು ನಿಲ್ಲಿಸುವ ಕುತಂತ್ರ ರಾಜಕೀಯವನ್ನು ಮುಂದುವರಿಸಿದ್ದಾರೆ. ಕರಾವಳಿಯ ಬಗ್ಗೆ ಅಸಡ್ಡೆ, ಅನುದಾನದ ಅಭಾವ ಮಂತ್ರಿಗಳ ಮಲತಾಯಿ ಧೋರಣೆ ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ 👇:

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ: ಟಿಡಿಬಿ ಮಹತ್ವದ ನಿರ್ಣಯ – vishwanews24

ಕಾಪು ಕ್ಷೇತ್ರದ ಅಭಿವೃದ್ಧಿಯನ್ನು ಸಹಿಸದ ಸೊರಕೆಯವರು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಸಂಘರ್ಷದ ರಾಜಕೀಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಅವರು ಎಚ್ಚರಿಸಿದರು.

ಶಾಸಕ ವಿ. ಸುನಿಲ್ ಕುಮಾರ್‌ಮಾತನಾಡಿ, ಕಂಬಳಕ್ಕೆ ಅನುದಾನ ಕೊಡು ವುದು, ಬಿಡುವುದು ಸರಕಾರಕ್ಕೆ ಬಿಟ್ಟದ್ದು. ಅನುದಾನ ಕೊಡಲಿ, ಬಿಡಲಿ ಕಂಬಳ ಸಮಿತಿ ನಿರ್ವಹಿಸುತ್ತದೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಶಿಲಾನ್ಯಾಸ ನಡೆಸಿರುವ ಕಾರಣಕ್ಕೆ ಪ್ರಕರಣ ದಾಖಲಿಸಿ ಬೆದರಿಕೆ ಒಡ್ಡುವ ಪ್ರಯತ್ನ ನಡೆದಿದೆ. ಇಂತಹ ಘಟನೆಗಳು ಮುಂದುವರಿದರೆ ಜಿಲ್ಲೆಯ ಶಾಸಕರು ಸೇರಿ ಪ್ರತಿಭಟನೆ ನಡೆಸುತ್ತೇವೆ ಎಂದರು.

ಶಾಸಕರಾದ ಯಶ್‌ಪಾಲ್ ಎ.ಸುವರ್ಣ, ಕಿರಣ್ ಕುಮಾರ್ ಕೊಡ್ಡಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

ಇದನ್ನೂ ಓದಿ 👇:

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ – vishwanews24

 

 

Leave a Reply